ಮಂಗಳೂರು : ಉಳ್ಳಾಲ ಕೋಟೆಕಾರ್ ಸಹಕಾರಿ ಬ್ಯಾಂಕ್ ದರೋಡೆ ಪ್ರಕರಣದ ಹಿನ್ನೆಲೆಯಲ್ಲಿ ಶುಕ್ರವಾರ ಮಂಗಳೂರಿನಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ತುರ್ತು ಸಭೆ ನಡೆಸಿದ ಮುಖ್ಯಮಂತ್ರಿಯವರು, ಶೀಘ್ರ ಆರೋಪಿಗಳನ್ನು ಪತ್ತೆ ಹಚ್ಚು ವಂತೆ ಖಡಕ್ ಸೂಚನೆ ನೀಡಿದರು. ಘಟನೆಯ ಕುರಿತಂತೆ ಸಮಗ್ರ ಮಾಹಿತಿ ಪಡೆದ ಅವರು, ನೀವೆಲ್ಲಾ ಇದ್ದು ಯಾಕೆ ಹೀಗಾ ಯ್ತು? ಆರೋಪಿಗಳು ಸಲೀಸಾಗಿ ತಪ್ಪಿಸಿ ಕೊಂಡು ಹೋಗಿದ್ದು ಹೇಗೆ ? ಎಷ್ಟು ಟೋಲ್ ಗಳನ್ನು ದಾಟಿ ಹೋಗಿದ್ದಾರೆ. ನೀವು ಟೋಲ್ ಗಳನ್ನು ಯಾಕೆ ಬಿಗಿಗೊಳಿಸಿಲ್ಲ ಎಂದು ಗರಂ ಆಗಿ ಪ್ರಶ್ನಿಸಿದ್ದಾರೆ