ಬೆಂಗಳೂರು : ಕಳೆದ 12 ದಿನಗಳಿಂದ ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಪೊಲೀಸರಿಂದ ಸತತ ವಿಚಾರಣೆ ಎದುರಿಸಿದ್ದ ನಟ ದರ್ಶನ್ ತೂಗುದೀಪ ಹಾಗೂ ಅವರ ನಾಲ್ವರು ಸಹಚರರು ಶನಿವಾರ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹ ಸೇರುವುದು ಬಹುತೇಕ ಖಚಿತವಾಗಿದೆ. ಪೊಲೀಸ್ ಕಸ್ಟಡಿ ಅಂತ್ಯ ಹಿನ್ನೆಲೆಯಲ್ಲಿ ನಗರದ ಎಸಿಎಂಎಂ ನ್ಯಾಯಾಲಯಕ್ಕೆ ದರ್ಶನ್ ಹಾಗೂ ಅವರ ಆಪ್ತರಾದ ವಿನಯ್, ಪ್ರದೂಷ್ ಹಾಗೂ ಧನರಾಜ್ರನ್ನು ಶನಿವಾರ ಹಾಜರುಪಡಿಸಲಾಗುತ್ತದೆ. ಈಗಾಗಲೇ ಪ್ರಕರಣದ ತನಿಖೆ ಸಲುವಾಗಿ ಮೂರು ಬಾರಿ ವಶಕ್ಕೆ ಪಡೆದಿರುವ ಕಾರಣ ಮತ್ತೊಮ್ಮೆ ಆರೋಪಿಗಳನ್ನು ಪೊಲೀಸರು ಸುಪರ್ದಿಗೆ ಪಡೆಯುವ ಸಾಧ್ಯತೆ ಕಡಿಮೆ ಇದೆ. ಹೀಗಾಗಿ ನ್ಯಾಯಾಂಗ ಬಂಧನಕ್ಕೊಳಗಾಗದರೆ ದರ್ಶನ್ ಗ್ಯಾಂಗ್ ಅಂತಿಮವಾಗಿ ಜೈಲು ಸೇರಲಿದೆ.