Home » ದರ್ಶನ್ ಗನ್ ಲೈಸೆನ್ಸ್ ಹಿಂಪಡೆವ ಸಾಧ್ಯತೆ
 

ದರ್ಶನ್ ಗನ್ ಲೈಸೆನ್ಸ್ ಹಿಂಪಡೆವ ಸಾಧ್ಯತೆ

ರೇಣುಕಾಸ್ವಾಮಿ ಕೊಲೆ ಪ್ರಕರಣ

by Kundapur Xpress
Spread the love

ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ನಟ ದರ್ಶನ್ ಬಳಿ ಇರುವ ಗನ್ ಲೈಸೆನ್ಸ್ ಅನ್ನು ಪೊಲೀಸರು ಹಿಂಪಡೆಯುವ ಸಾಧ್ಯತೆಯಿದೆ. ಕೊಲೆ ಪ್ರಕರಣದಲ್ಲಿ ಈಗಾಗಲೇ ಜಾಮೀನು ಮೇಲೆ ‘ಬಿಡುಗಡೆಯಾಗಿರುವ ದರ್ಶನ್, ಪರವಾನಗಿ ಗನ್ ಬಳಸಿಕೊಂಡು ಪ್ರಕರಣದ ಸಾಕ್ಷಿಗಳಿಗೆ ಬೆದರಿಕೆ ಹಾಕುವ ಸಾಧ್ಯತೆಯಿದೆ. ಹೀಗಾಗಿ ನಿಮ್ಮ ಗನ್ ಏಕೆ ರದ್ದುಗೊಳಿಸಬಾರದು ಎಂದು ಪ್ರಶ್ನಿಸಿ ನಗರ ಪೊಲೀಸ್ ಆಡಳಿತ ವಿಭಾಗದ ಡಿಸಿಪಿ ಪಲ್ಟಿನಿ ಸಾಹು ಅವರು ನಟನಿಗೆ ನೋಟಿಸ್ ಜಾರಿಗೊಳಿಸಿದ್ದಾರೆ.

ನೋಟಿಸ್ ತಲುಪಿದ ಏಳು ದಿನಗಳೊಳಗೆ ಸ್ಪಷ್ಟನೆ ನೀಡುವಂತೆ ನೋಟಿಸ್‌ನಲ್ಲಿ ಸೂಚಿಸಿದ್ದಾರೆ. ದರ್ಶನ್ ಸ್ಪಷ್ಟನೆ ನೀಡಿದ ಬಳಿಕ ಅದನ್ನು ಪರಿಶೀಲಿಸಿ ಗನ್ ಲೈಸೆನ್ಸ್ ಹಿಂಪಡೆಯುವ ಬಗ್ಗೆ ಪೊಲೀಸರು ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ದರ್ಶನ್ ಕೆಲ ವರ್ಷಗಳ ಹಿಂದೆ ಆತ್ಮರಕ್ಷಣೆಗಾಗಿ ಗನ್ ಲೈಸೆನ್ಸ್ ಪಡೆದಿದ್ದರು. ಇದೀಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಅವರು ಸಿಲುಕಿರುವುದರಿಂದ ಸಂಕಷ್ಟ ಎದುರಾಗಿದೆ. ಕೊಲೆ ಪ್ರಕರಣದಲ್ಲಿ ಜೂನ್ ತಿಂಗಳಲ್ಲಿ ಬಂಧನಕ್ಕೆ ಒಳಗಾಗಿ ಸುಮಾರು 6 ತಿಂಗಳು ಜೈಲು ವಾಸ ಅನುಭವಿಸಿದ್ದ ದರ್ಶನ್ ಡಿ.13ರಂದು ಹೈಕೋರ್ಟ್‌ನಿಂದ ಜಾಮೀನು ಪಡೆದು ಬಿಡುಗಡೆಯಾಗಿದ್ದರು

 

Related Articles

error: Content is protected !!