ಬೆಳಗಾವಿ : ರಾಜ್ಯದಲ್ಲಿ ಇತ್ತೀಚಿಗೆ ಸಂಭವಿಸಿದ ಬಾಣಂತಿ ಯರ ಸಾವು ಪ್ರಕರಣದ ಕುರಿತು ಸತ್ಯಾಸತ್ಯತೆ ಹೊರಬರಲು ಮುಖ್ಯಮಂತ್ರಿಯವರೊಂದಿಗೆ ಚರ್ಚಿಸಿ ಎಸ್‌ಐಟಿ ತನಿಖೆ ಸೇರಿ ಉನ್ನತಮಟ್ಟದ ನ್ಯಾಯಾಂಗ ತನಿಖೆ ನಡೆಸುವ ಬಗ್ಗೆ ನಿರ್ಧರಿಸಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.
ರಾಜ್ಯದಲ್ಲಿ ಬಾಣಂತಿಯರ, ಶಿಶುಗಳ ಸಾವು ಪ್ರಕರಣದ ಕುರಿತು ಉತ್ತರ ನೀಡುವ ಸಂದರ್ಭದಲ್ಲಿ ಮಾತನಾಡಿದ ಅವರು, ನವೆಂಬರ್ 9 ರಿಂದ 11ರವರೆಗೆ ಬಳ್ಳಾರಿಯ ಜಿಲ್ಲಾ ಆಸ್ಪತ್ರೆಯಲ್ಲಿ ಸಿಸೇರಿಯನ್ ಶಸ್ತ್ರಚಿಕಿತ್ಸೆಯ ಬಳಿಕ ಸಂಭವಿಸಿದ ಸಾವುಗಳ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡು ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದಿಂದ ತಜ್ಞರ ಸಮಿತಿಯನ್ನು ರಚಿಸಲಾಗಿದೆ ಎಂದು ಅವರು ತಿಳಿಸಿದರು