ಸೋಮನಹಳ್ಳಿ : ಮಾಜಿ ಸಿಎಂ ಎಸ್.ಎಂ.ಕೃಷ್ಣ ಅವರ ಅಂತ್ಯಕ್ರಿಯೆಯನ್ನು ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಸೋಮನಹಳ್ಳಿಯಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನಡೆಸಲಾಯಿತು.
ಮೂರು ಸುತ್ತು ಕುಶಾಲು ತೋಪು ಸಿಡಿಸಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವೇರಿಸಲಾಯಿತು ಎಸ್ಎಮ್ ಕೃಷ್ಣ ಅವರ ಮೊಮ್ಮಗ ಅಮರ್ತ್ಯ ಅವರು ತಾತನ ಚಿತೆಗೆ ಅಗ್ನಿ ಸ್ಪರ್ಶ ಮಾಡುವ ಮೂಲಕ ಅಂತ್ಯಕ್ರಿಯೆ ನೆರವೇರಿಸಿದರು
ಅಂತ್ಯಕ್ರಿಯೆಗೂ ಮೊದಲು ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಕೇಂದ್ರ ಸಚಿವರಾದಂತಹ ಹೆಚ್‌ಡಿ ಕುಮಾರಸ್ವಾಮಿ, ಸಂಸದ ಬಸವರಾಜ ಬೊಮ್ಮಾಯಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ, ವಿಪಕ್ಷ ನಾಯಕ ಆರ್ ಅಶೋಕ್, ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ಸುಮಲತಾ ಅಂಬರೀಶ್ ಸೇರಿದಂತೆ ಹಲವು ರಾಜಕೀಯ ನಾಯಕರು ಗಣ್ಯರು ಅಂತಿಮ ದರುಶನ ಪಡೆದುಕೊಂಡರು