Home » ರಾಜ್ಯಕ್ಕೆ ಅಂಕಿತಾ ಪ್ರಥಮ
 

ರಾಜ್ಯಕ್ಕೆ ಅಂಕಿತಾ ಪ್ರಥಮ

by Kundapur Xpress
Spread the love

ಬೆಂಗಳೂರು: ಮಾರ್ಚ್ ಮತ್ತು ಏಪ್ರಿಲ್-2024ರಲ್ಲಿ ನಡೆದ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಗೊಂಡಿದ್ದು, ಶೇ.73.40 ರಷ್ಟು ಫಲಿತಾಂಶ ದಾಖಲಾಗಿದೆ. ಪರೀಕ್ಷೆ ಬರೆದ 8,59,967 ವಿದ್ಯಾರ್ಥಿಗಳ ಪೈಕಿ  6,31,204 ಮಂದಿ ಉತ್ತೀರ್ಣರಾಗಿದ್ದು, ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ

ಬಾಗಲಕೋಟೆಯ ಮುಧೋಳ ತಾಲೂಕಿನ ಮೆಳ್ಳಿಗೇರಿ ಗ್ರಾಮದ ಮೊರಾರ್ಜಿ ದೇಸಾಯಿ ಶಾಲೆಯ ಅಂಕಿತಾ ಬಸಪ್ಪ ಕೊಣ್ಣೂರ 625ಕ್ಕೆ 625 ಅಂಕ ಪಡೆದು ಮೊದಲ ಸ್ಥಾನ ಪಡೆದಿದ್ದಾರೆ. ಈ ಮೂಲಕ ರೈತನ ಮಗಳು ರಾಜ್ಯದಲ್ಲಿ ಸಾಧನೆ ಮಾಡಿ ಕೀರ್ತಿ ಪತಾಕೆ ಹಾರಿಸಿದ್ದಾರೆ.

ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶದ ಕುರಿತು ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಅಧ್ಯಕ್ಷೆ ಎನ್.ಮಂಜುಶ್ರೀ ಅವರು, ಈ ಬಾರಿ ಪ್ರಪ್ರಥಮ ಬಾರಿಗೆ ಎಲ್ಲ 2,750 ಪರೀಕ್ಷೆ ಕೇಂದ್ರಗಳಲ್ಲಿ ಸಿಸಿ ಟಿವಿ ಮೂಲಕ ವೆಬ್ ಕಾಸ್ಟಿಂಗ್ ಮಾಡುವ ಹೊಸ ಪದ್ಧತೆಯನ್ನು ಪರಿಚಯಿಸಲಾಗಿದೆ ಎಂದರು

   

Related Articles

error: Content is protected !!