ಬೆಂಗಳೂರು : ಲೈಂಗಿಕ ದೌರ್ಜನ್ಯ ಆರೋಪ ಹೊತ್ತು ವಿದೇಶದಲ್ಲಿದ್ದ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ 34 ದಿನಗಳ ಅಜ್ಞಾತವಾಸಕ್ಕೆ ಶುಕ್ರವಾರ ಅಂತಿಮ ತೆರೆ ಬೀಳಲಿದ್ದು, ದೇವನಹಳ್ಳಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತಡರಾತ್ರಿ ಅವರು ಬಂದಿಳಿದಿದ್ದಾರೆ. ಗುರುವಾರ ಮಧ್ಯಾಹ್ನ 3.30ಕ್ಕೆ ಜರ್ಮನಿಯ ಮ್ಯೂನಿಕ್ ನಗರದಿಂದ ಬೆಂಗಳೂರಿಗೆ ಹೊರಟ ವಿಮಾನದಲ್ಲಿ ಪ್ರಜ್ವಲ್ ಪ್ರಯಾ ಣಿಸಿದ್ದು, ಕೆಐಎಗೆ ರಾತ್ರಿ 12.30ಕ್ಕೆ ವಿಮಾನ ಬಂದಿಳಿದಿದೆ. ವಿಮಾನ ನಿಲ್ದಾಣದಲ್ಲೇ ಪ್ರಜ್ವಲ್ ಅವರನ್ನು ವಿಶೇಷ ತನಿಖಾ ದಳ (ಎಸ್‌ಐಟಿ) ವಶಕ್ಕೆ ಪಡೆದಿದ್ದು ನ್ಯಾಯಾಲಯದ ಮುಂದೆ ಶುಕ್ರವಾರ ಅವರನ್ನು ಹಜರುಪಡಿಸಿ ಬಂಧನಕ್ಕೊಳಪಡಿಸುವ ಸಾಧ್ಯತೆಗಳಿವೆ ಎಂದು ತಿಳಿದು ಬಂದಿದೆ
Categories
ಜರ್ಮನಿಯಿಂದ ಮರಳಿದ ಪ್ರಜ್ವಲ್ ಅರೆಸ್ಟ್