Home » 500 ಕೋಟಿ ದಾಟಿದ ಶಕ್ತಿ ಪ್ರಯಾಣದ ಸಂಭ್ರಮ
 

500 ಕೋಟಿ ದಾಟಿದ ಶಕ್ತಿ ಪ್ರಯಾಣದ ಸಂಭ್ರಮ

by Kundapur Xpress
Spread the love

ಬೆಂಗಳೂರು : ರಾಜ್ಯ ಸರ್ಕಾರದ ಮೊದಲ ಗ್ಯಾರಂಟಿ ‘ಶಕ್ತಿ’ ಯೋಜನೆಯಡಿ ಸರ್ಕಾರಿ ಸಾರಿಗೆ ಬಸ್‌ಗಳಲ್ಲಿ ಉಚಿತವಾಗಿ ಸಂಚರಿಸಿದ ಮಹಿಳೆಯರ ಸಂಖ್ಯೆ 500 ಕೋಟಿ ಪೂರ್ಣಗೊಂಡ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾಂಕೇತಿಕವಾಗಿ ಬಿಎಂಟಿಸಿ ಬಸ್ ಮಹಿಳಾ ಪ್ರಯಾಣಿಕರಿಗೆ ಉಚಿತ ಟಿಕೆಟ್ ವಿತರಿಸುವ ಜತೆಗೆ ಗೌರವಿಸಿ ಸಿಹಿ ಹಂಚುವ ಮೂಲಕ ವಿಶಿಷ್ಟವಾಗಿ ಸಂಭ್ರಮಿಸಿದರು

ಶಕ್ತಿ ಯೋಜನೆ ಅಡಿ 500 ಕೋಟಿ ಉಚಿತ ಪ್ರಯಾಣ ಪೂರ್ಣಗೊಂಡ ಸಂಭ್ರಮವನ್ನು ರಾಜ್ಯಾದ್ಯಂತ ಸಹ ಆಚರಿಸಲಾಯಿತು. ಜಿಲ್ಲೆ ಮತ್ತು ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಸದಸ್ಯರು ಮತ್ತು ಆಯಾ ಸಾರಿಗೆ ನಿಗಮಗಳ ಅಧಿಕಾರಿಗಳು ಬಸ್‌ಗೆ ಪೂಜೆ ಸಲ್ಲಿಸಿ ಪ್ರಯಾಣಿಕರಿಗೆ ಸಿಹಿ ಹಂಚಿ ಸಂಭ್ರಮಿಸಿದರು

 

Related Articles

error: Content is protected !!