Home » ನನ್ನ ರೆಡ್ಡಿ ಸಂಬಂಧ ಅಂತ್ಯ – ಶ್ರೀರಾಮುಲು
 

ನನ್ನ ರೆಡ್ಡಿ ಸಂಬಂಧ ಅಂತ್ಯ – ಶ್ರೀರಾಮುಲು

by Kundapur Xpress
Spread the love

 ಹಗರಿಬೊಮ್ಮನಹಳ್ಳಿ : ಬಿಜೆಪಿ ಶಾಸಕ ಜನಾರ್ದನ ರೆಡ್ಡಿ ಜೊತೆಗಿನ ನನ್ನ ಸಂಬಂಧದಲ್ಲಿ ಬಿರುಕು ಬಿಟ್ಟಿದೆ. ಅದು ಎಂದಿಗೂ ಸರಿಹೋಗುವುದಿಲ್ಲ ಎಂದು ಮಾಜಿ ಸಚಿವ ಬಿ.ಶ್ರೀರಾಮುಲು ತಿಳಿಸಿದರು. ತಾಲೂಕಿನ ನಂದಿಪುರ ಗ್ರಾಮದಲ್ಲಿ ದೊಡ್ಡ ಬಸವೇಶ್ವರ ರಥೋತ್ಸವಕ್ಕೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿ, ವೈಯಕ್ತಿಕ ಜೀವನವೇ ಬೇರೆ, ರಾಜಕಾ ರಣವೇ ಬೇರೆ. ಆದರೆ, ನನ್ನ ಮತ್ತು ಜನಾರ್ದನ ರೆಡ್ಡಿ ಸಂಬಂಧ ಇಲ್ಲಿಗೆ ಅಂತ್ಯಗೊಂಡಂತೆ ಎಂದರು

ಬಿಜೆಪಿ ರಾಜ್ಯಾಧ್ಯಕ್ಷರನ್ನು ಬದಲಾಯಿಸುವುದಾದರೆ ನನಗೊಂದು ಅವಕಾಶ ಕೊಡಿ ಎಂದು ಕೇಳಿದ್ದೇನೆ. ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮತ್ತು ಹೈಕಮಾಂಡ್ ಕೈಗೊಳ್ಳುವ ನಿರ್ಧಾರಕ್ಕೆ ಬದ್ದರಾಗಿದ್ದೇವೆ. ಹೈಕಮಾಂಡ್ ಏನೇ ತೀರ್ಮಾನ ಕೈಗೊಂಡರೂ ಸರಿ ಎಂದು ಹೇಳಿದರು.

ಕೂಡ್ಲಿಗಿ ಕ್ಷೇತ್ರದಿಂದ ಮುಂದಿನ ವಿಧಾನಸಭೆ ಚುನಾವಣೆಗೆ ಸ್ಪರ್ಧೆ ಕುರಿತು ಈಗಲೇ ಏನನ್ನೂ ಹೇಳಲಾಗದು. ಯಾವ ಕ್ಷೇತ್ರ ಎಸ್ಪಿಗೆ ಮೀಸಲಿರುವುದೋ ಆ ಕ್ಷೇತ್ರದಿಂದ ಸ್ಪರ್ಧಿಸುತ್ತೇನೆ ಎಂದು ಮಾರ್ಮಿಕವಾಗಿ ಹೇಳಿದರು. ನಾನು ಪಕ್ಷದ ಪರವಾಗಿ ಕೆಲಸ ಮಾಡುತ್ತೇನೆ. ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಕಾಂಗ್ರೆಸ್‌ಗೆ ಭವಿಷ್ಯವಿಲ್ಲ. ಹಾಗಾಗಿ ಬಿಜೆಪಿ ಗೆಲ್ಲಿಸಲು ರಾಜ್ಯಾದ್ಯಂತ ಕೆಲಸ ಮಾಡುವೆ ಎಂದು ತಿಳಿಸಿದರು.

 

Related Articles

error: Content is protected !!