ಉಡುಪಿ : ಸಚಿವ ಜಮೀರ್ ಅಹ್ಮದ್ ಅವರು ಇಡೀ ರಾಜ್ಯ ತಿರುಗಾಟ ಮಾಡುತ್ತಾ, ಎಲ್ಲವೂ ವಕ್ಸ್ ಆಸ್ತಿ ಎನ್ನುತ್ತಿದ್ದಾರೆ. ಇದಕ್ಕೆ ಸಿಎಂ ಸಿದ್ದರಾಮಯ್ಯ ಬೆಂಬಲ ಕೊಡುತ್ತಿರುವುದು ನೋವಿನ ಸಂಗತಿ ಎಂದು ಸಂಸದ ಕೋಟ ಶ್ರೀನಿವಾಸ್ ಪೂಜಾರಿ ಹೇಳಿದರು.
ಅವರು ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ತಮ್ಮ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ರೈತರು ಒಂದು ತುಂಡ ಭೂಮಿ ಕಳೆದುಕೊಳ್ಳಬಾರದು. ಇದನ್ನು ಹೋರಾಟವಾಗಿ ಕೈಗೆತ್ತಿಕೊಳ್ಳುತ್ತದೆ. ತಪ್ಪು ಮಾಡಿದವರ ಮೇಲೆ ಸರಕಾರ ಏನು ಕ್ರಮ ತೆಗೆದುಕೊಂಡಿದೆ ? ತತ್ ಕ್ಷಣವೇ ರೈತರಿಗೆ ಭೂಮಿ ಹಿಂದಿರುಗಿಸಿ, ತಪ್ಪಿತಸ್ಥರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದರು.