84
ನವದೆಹಲಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ದೆಹಲಿಯ ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ದೌಪದಿ ಮುರ್ಮು ಅವರನ್ನು ಭೇಟಿ ಮಾಡಿ ರಾಜ್ಯ ವಿಧಾನಮಂಡಲವು ಅಂಗೀಕರಿಸಿದ 7 ಪ್ರಮುಖ ಮಸೂದೆಗಳಿಗೆ ಅನುಮೋದನೆ ನೀಡುವಂತೆ ಮನವಿ ಮಾಡಿದ್ದಾರೆ.
ರಾಷ್ಟ್ರಪತಿಯವರ ಅನುಮೋದನೆಗಾಗಿ ಕಾಯುತ್ತಿರುವ ಮಸೂದೆಗಳಲ್ಲಿ ಶಿಕ್ಷಣ, ಗಣಿಗಾರಿಕೆ ತೆರಿಗೆ, ಸರ್ಕಾರಿ ಗುತ್ತಿಗೆಗಳಲ್ಲಿ ಮುಸ್ಲಿಮರಿಗೆ ಮೀಸಲು ಮತ್ತು ಆಡಳಿತ ಸುಧಾರಣೆಗಳನ್ನು ಒಳಗೊಂಡ ಮಹತ್ವದ ಬಿಲ್‌ಗಳು ಸೇರಿವೆ.
ಭೇಟಿ ಬಳಿಕ ಮಾತನಾಡಿದ ಸಿದ್ದರಾಮಯ್ಯ, ರಾಷ್ಟ್ರಪತಿಯವರನ್ನು ಭೇಟಿ ಮಾಡಿ ಮಸೂದೆಗಳ ಅಂಗೀಕಾರಕ್ಕೆ ಮನವಿ ಮಾಡಿದ್ದೇನೆ. 7 ಬಿಲ್‌ಗಳಿಗೆ ಸಹಿ ಹಾಕಿಲ್ಲ. ಹೀಗಾಗಿ, ರಾಷ್ಟ್ರಪತಿಯವರನ್ನು ಭೇಟಿ ಮಾಡಿ, ಈ ಬಗ್ಗೆ ಚರ್ಚಿಸಿದ್ದೇನೆ ಮನವಿಗೆ ಸಕಾರಾತ್ಮಕವಾಗಿ ಪ್ರತಿಕ್ರಿಯಿಸಿರುವ ರಾಷ್ಟ್ರಪತಿ, ಸಂಬಂಧಪಟ್ಟ ಇಲಾಖೆಗಳಿಗೆ ಇವುಗಳನ್ನು ಪರಿಶೀಲನೆಗೆ ಕಳಿಸಿದ್ದಾಗಿ ತಿಳಿಸಿದ್ದಾರೆ.

