74
ಮೈಸೂರು : ನಾನು ಉಪ ಮುಖ್ಯಮಂತ್ರಿ ಡಿ.ಕೆ. ಶಿವ ಕುಮಾರ್ ಚೆನ್ನಾಗಿಯೇ ಇದ್ದೇವೆ. ನಮ್ಮಿಬ್ಬರ ನಡುವೆ ತಂದಾಕುವ ಪ್ರಯತ್ನ ಮಾಡಿದರೂ ಅದು ಆಗುವುದಿಲ್ಲ. ನಾವಿಬ್ಬರು ಒಟ್ಟಾಗಿಯೇ ಇದ್ದೇವೆ. ನಮ್ಮ ಸರ್ಕಾರ 5 ವರ್ಷ ಕಲ್ಲು ಬಂಡೆ ರೀತಿ ಇರುತ್ತದೆ. ನಮ್ಮ ಸರ್ಕಾರ ಯಾರಿಂದಲೂ ಅಲುಗಾಡಿಸಲು ಆಗುವುದಿಲ್ಲ ‘ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಜತೆಗೆ ಮಾಧ್ಯಮ ಕ್ಯಾಮೆರಾಗಳ ಮುಂದೆ ಡಿಕೆಶಿ ಕೈ ಹಿಡಿದು ಮೇಲೆತ್ತುವ ಮೂಲಕ ಒಗ್ಗಟ್ಟಿನ ಸಂದೇಶ ರವಾನಿಸಿದ್ದಾರೆ
ಕಾವೇರಿಗೆ ಬಾಗಿನ ಅರ್ಪಿಸಲು ಸೋಮವಾರ ಮೈಸೂರು ಏರೋರ್‌ಗೆ ಬಂದ ವೇಳೆ ಅವರು ಮಾತನಾಡಿದರು. ಈ ವೇಳೆ ಡಿ.ಕೆ. ಶಿವಕುಮಾರ್ ಕೈ ಹಿಡಿದು ಎತ್ತಿ ನಾವು ಚೆನ್ನಾಗಿದ್ದೇವೆ ಎಂದು ಮಾಧ್ಯಮಕ್ಕೆ ತೋರಿಸಿದ ಅವರು, ನಮ್ಮ ಬಗ್ಗೆ ಮಾತನಾಡುವ ಶ್ರೀರಾಮಲು ಎಷ್ಟು ಚುನಾವಣೆ ಸೋತಿದ್ದಾನೆ ಹೇಳಿ ಬಿಜೆಪಿಯವರು ಸುಳ್ಳು ಹೇಳುವುದರಲ್ಲಿ ನಿಸ್ಸಿಮರು ಎಂದರು

