ಬೆಂಗಳೂರು : ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕುಟುಂಬ ಒಡೆತನದ ಸಿದ್ದಾರ್ಥ ವಿಹಾರ ಟ್ರಸ್ಟ್ ನಡೆಸುತ್ತಿರುವ ಪಾಲಿ ಅಂತಾರಾಷ್ಟ್ರೀಯ ಸಂಸ್ಥೆಗೆ ಉಚಿತವಾಗಿ 19 ಎಕರೆ ನೀಡಲಾಗಿದೆ’ ಎಂದು ರಾಜ್ಯಸಭೆಯ ಬಿಜೆಪಿ ಸದಸ್ಯ ಲೆಹರ್ ಸಿಂಗ್ ಸಿರೊಯಾ ಆಪಾದಿಸಿದ್ದಾರೆ. ಈ ಬಗ್ಗೆ ಸ್ವತಂತ್ರ ತನಿಖಾ ಸಂಸ್ಥೆ ವತಿಯಿಂದ ತನಿಖೆ ನಡೆಸಬೇಕು ಎಂದೂ ಅವರು ಆಗ್ರಹಿಸಿದ್ದಾರೆ.
‘ಕಲಬುರಗಿಯಲ್ಲಿ ಪಾಲಿ ಅಂತಾರಾಷ್ಟ್ರೀಯ ಸಂಸ್ಥೆಯನ್ನು ಸಿದ್ದಾರ್ಥ ವಿಹಾರ ಟ್ರಸ್ಟ್ ನಡೆಸುತ್ತಿದೆ. ಟ್ರಸ್ಟ್‌ನಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರ ಪತ್ನಿ, ಅಳಿಯ ಮತ್ತು ಇಬ್ಬರು, ಪುತ್ರರು ಇದ್ದಾರೆ. ಸಂಸ್ಥೆಯ ಕಾರ್ಯದರ್ಶಿ ಯಾಗಿ ಸಂಸದ ರಾಧಾಕೃಷ್ಣ ಅವರು ಕಾರ್ಯನಿರ್ವಹಿಸುತ್ತಿದ್ದಾರೆ
ಸಿದ್ದಾರ್ಥ ವಿಹಾರ ಟ್ರಸ್ಟ್‌ಗೆ ಬೆಂಗಳೂರಿನ ಬಳಿಯ ಏರೋಸ್ಪೇಸ್ ಪಾರ್ಕ್‌ನಲ್ಲಿ 5 ಎಕರೆ ಜಮೀನು ನೀಡಲಾಗಿದೆ. ಅಲ್ಲದೇ, ಪಾಲಿ ಅಂತಾರಾಷ್ಟ್ರೀಯ ಸಂಸ್ಥೆಗೆ 19 ಎಕರೆ ಭೂಮಿಯನ್ನು ಉಚಿತವಾಗಿ ನೀಡಲಾಗಿದೆ’ ಎಂದು ದೂರಿದ್ದಾರೆ