Home » ಸದ್ಯಕ್ಕಿಲ್ಲ ಸಚಿವ ಸಂಪುಟ ವಿಸ್ತರಣೆ
 

ಸದ್ಯಕ್ಕಿಲ್ಲ ಸಚಿವ ಸಂಪುಟ ವಿಸ್ತರಣೆ

ಹಲವರಿಗೆ ನಿರಾಶೆ

by Kundapur Xpress
Spread the love

ಹೊಸದಿಲ್ಲಿ: ಸಾಕಷ್ಟು ನಿರೀಕ್ಷೆ ಮೂಡಿಸಿದ್ದ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ, ಸಂಪುಟ ವಿಸ್ತರಣೆ ಮತ್ತು ಖಾಲಿ ಇರುವ 4 ವಿಧಾನ ಪರಿಷತ್ ಸ್ಥಾನಗಳ ಭರ್ತಿಗೆ ಕಾಂಗ್ರೆಸ್ ಹೈಕಮಾಂಡ್ ತಾತ್ಕಾಲಿಕ ಬ್ರೇಕ್ ಹಾಕಿದ್ದು ನಿರೀಕ್ಷೆಯಲ್ಲಿದ್ದವರಿಗೆ ನಿರಾಸೆ ಉಂಟಾಗಿದೆ.

ತಿಂಗಳ ನಂತರ ದಿಲ್ಲಿಯ ಕರ್ನಾಟಕ ಭವನದ ಉದ್ಘಾಟನೆಯ ನೆಪದಲ್ಲಿ ದಿಲ್ಲಿಗೆ ಭೇಟಿ ನೀಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಗುರುವಾರ ಪಕ್ಷದ ವರಿಷ್ಠ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿ ಸುಮಾರು 30 ನಿಮಿಷ ಮಾತುಕತೆ ನಡೆಸಿದರು. ಮಾತುಕತೆ ವೇಳೆ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ, ಸಂಪುಟ ವಿಸ್ತರಣೆ ಮತ್ತು ಖಾಲಿ ಇರುವ 4 ವಿಧಾನ ಪರಿಷತ್ ಹುದ್ದೆಗಳ ನೇಮಕಾತಿ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪ್ರಸ್ತಾವನೆಗೆ ರಾಹುಲ್ ಗಾಂಧಿ ನಿರಾಸಕ್ತಿ ತೋರಿದ್ದು, ಮುಂದಿನ ದಿನಗಳವರೆಗೆ ಕಾದು ನೋಡುವುದಾಗಿ ತಿಳಿಸಿದ್ದಾರೆ.

 

Related Articles

error: Content is protected !!