ಶಿವಮೊಗ್ಗ : ಕಳಸವಳ್ಳಿ (ಸಿಗಂದೂರು) ಸೇತುವೆ ಲೋಕಾರ್ಪಣೆಗೆ ಸಂಪೂರ್ಣ ಸಿದ್ದವಾಗಿದ್ದು ಇಂದು ಜು.14 ರಂದು ಮಧ್ಯಾಹ್ನ 12.00 ಗಂಟೆಗೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವರಾದ ನಿತಿನ್ ಗಡ್ಕರಿ ಉದ್ಘಾಟಿಸಲಿದ್ದಾರೆ
ಇವರೊಂದಿಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಸಂಸದ ಬಿ.ವೈ. ರಾಘವೇಂದ್ರ, ರಾಜ್ಯ ಸಚಿವರಾದ ಮಧು ಬಂಗಾರಪ್ಪ, ಸತೀಶ್ ಜಾರಕಿಹೊಳಿ, ಶಾಸಕರಾದ ಗೋಪಾಲಕೃಷ್ಣ ಬೇಳೂರು, ಆರಗ ಜ್ಞಾನೇಂದ್ರ, ಬಿ.ವೈ. ವಿಜಯೇಂದ್ರ ಸೇರಿದಂತೆ ಎಲ್ಲಾ ಸ್ಥಳೀಯ ಶಾಸಕರು ಪಾಲ್ಗೊಳ್ಳಲಿದ್ದಾರೆ. ಮಧ್ಯಾಹ್ನ 2.15ಕ್ಕೆ ಸಾಗರದ ನೆಹರೂ ಮೈದಾನದಲ್ಲಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳಿಗೆ ಅಡಿಗಲ್ಲು ಕಾರ್ಯಕ್ರಮ ನಡೆಯಲಿದ್ದು, ಸಚಿವ ನಿತಿನ್ ಗಡ್ಕರಿ ನೆರವೇರಿಸಲಿದ್ದಾರೆ.
ಜಲವಿದ್ಯುತ್ ಯೋಜನೆಗಾಗಿ ಲಿಂಗನಮಕ್ಕಿ ಜಲಾಶಯ ನಿರ್ಮಾಣದಿಂದಾಗಿ ದ್ವೀಪವಾಗಿರುವ ಕರೂರು ಹಾಗೂ ಬಾರಂಗಿ ಹೋಬಳಿಗೆ ಸಂಪರ್ಕದೊಂದಿಗೆ ಕರಾವಳಿ ಹಾಗೂ ಮಲೆನಾಡು ಬೆಸೆಯುವ ಸೇತುವೆ ಇದಾಗಿದೆ. ದೇಶದ ಅತೀ ಉದ್ದದ ನಾಲ್ಕನೇ ಸೇತುವೆ ಇದಾಗಿದ್ದು ರಾಜ್ಯದ ಅತೀ ಉದ್ದದ ಸೇತುವೆಯಾಗಿದೆ

