188
ಬೆಂಗಳೂರು : ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಹದಗೆಟ್ಟು ಅಪರಾಧ ಪ್ರಮಾಣ ಹೆಚ್ಚಳವಾಗಿದೆ ಕೂಡಲೇ ಈ ಸಂಬಂಧ ಕಾರ್ಯಪ್ರವೃತ್ತರಾಗಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಕ್ರಮ ಕೈಗೊಳ್ಳುವಂತೆ ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದಗೌಡ ನೇತೃ ತ್ವದ ಬಿಜೆಪಿ ನಿಯೋಗವು ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಮನವಿ ಮಾಡಿದೆ.
ಶನಿವಾರ ರಾಜ್ಯ ಪೊಲೀಸ್ ಪ್ರಧಾನ ಕಚೇರಿಗೆ ಭೇಟಿ ನೀಡಿದ್ದ ಬಿಜೆಪಿ ನಿಯೋಗವು ರಾಜ್ಯ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್ ಅವರಿಗೆ ಮನವಿ ಸಲ್ಲಿಸಿತು.

