ಬೆಂಗಳೂರು : ರಾಜ್ಯದಲ್ಲಿ ರಸ್ತೆಗಳ ಅಭಿವೃದ್ಧಿಗಾಗಿ ಒಂದು ಲಕ್ಷ ಕೋಟಿ ರೂ. ನೀಡಲು ಕೇಂದ್ರ ಸರ್ಕಾರ ಬದ್ಧವಾಗಿದ್ದು, ಶೀಘ್ರ ಭೂಸ್ವಾಧೀನ ಮಾಡಿ ಪ್ರಸ್ತಾವನೆ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಲಾಗಿದೆ ಎಂದು ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ
ಗುರುವಾರ ಅರಮನೆ ಮೈದಾನದಲ್ಲಿ ನಡೆದ ಬಿಜೆಪಿ ರಾಜ್ಯ ವಿಶೇಷ ಕಾರ್ಯ ಕಾರಿಣಿಯ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿಗಳು ನನ್ನನ್ನು ಭೇಟಿಯಾಗಿದ್ದರು. ರಾಜ್ಯದ ರಸ್ತೆಗಳ ಅಭಿವೃದ್ಧಿಗಾಗಿ ಒಂದು ಲಕ್ಷ ಕೋಟಿ ರು. ನೀಡುವುದಾಗಿ ಆಶ್ವಾಸನೆ ನೀಡಿದ್ದೇನೆ. ಆದರೆ, ಭೂಸ್ವಾಧೀನ ಪ್ರಕ್ರಿಯೆ ಮುಗಿಸಿಕೊಂಡು ಬರುವಂತೆ ತಿಳಿಸಲಾಗಿದೆ. ಗಾಳಿಯಲ್ಲಿ ರಸ್ತೆ ಮಾಡಲು ಸಾಧ್ಯವಿಲ್ಲ.ಒಂದು ತಿಂಗಳಲ್ಲಿ ಭೂಸ್ವಾಧೀನ ಪ್ರಕ್ರಿಯೆಗಳನ್ನು ಮುಗಿಸಿ ಪ್ರಸ್ತಾವನೆ ಸಲ್ಲಿಸಿದರೆ, ಒಂದಲ್ಲ, ಎರಡು ಲಕ್ಷ ಕೋಟಿ ರೂ. ಬೇಕಾದರೂ ನೀಡಲಾಗುವುದು ಎಂದರು