Home » ವಕ್ಪ್‌ ವಿರುದ್ದ ಬಿಜೆಪಿ ಜನಾಂದೋಲನ
 

ವಕ್ಪ್‌ ವಿರುದ್ದ ಬಿಜೆಪಿ ಜನಾಂದೋಲನ

by Kundapur Xpress
Spread the love

ಬೆಂಗಳೂರು : ವಕ್ಸ್ ಆಸ್ತಿ ಒತ್ತುವರಿ ಸಮಸ್ಯೆ ವಿರುದ್ದ ನಮ್ಮ ಭೂಮಿ ನಮ್ಮ ಹಕ್ಕು ಶೀರ್ಷಿಕೆಯಡಿಯಲ್ಲಿ ಜನಾಂದೋಲನ ಮಾಡುತ್ತಿದ್ದೇವೆ. ನ.21 ಮತ್ತು 22ರಂದು ರಾಜ್ಯದ ಎಲ್ಲ ಜಿಲ್ಲಾಧಿಕಾರಿ ಕಚೇರಿ ಮತ್ತು ತಾಲೂಕು ತಹಶೀಲ್ದಾರರ ಕಚೇರಿಗಳ ಮುಂದೆ ದಿನವಿಡೀ ಪ್ರತಿಭಟನೆ ನಡೆಸಲಿದ್ದೇವೆ ಎಂದು ಶಾಸಕ ಅಶ್ವತ್ಥನಾರಾಯಣ ತಿಳಿಸಿದ್ದಾರೆ.

ಮಂಗಳವಾರ ಬಿಜೆಪಿ ರಾಜ್ಯ ಕಾರ್ಯಾಲಯದಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿಯೂ ಪ್ರತಿಭಟನೆ ನಡೆಸಲಿದ್ದೇವೆ ರಾಜ್ಯಾದ್ಯಂತ ಪ್ರತಿಭಟನೆಯ ಜತೆಗೆ ಎಲ್ಲ ಸಂತ್ರಸ್ತರಿಂದ ಅರ್ಜಿ ಸ್ವೀಕಾರ, ವಕ್ಸ್ ಅಧಿಕಾರ ದುರ್ಬಳಕೆ ಯಿಂದ ಸಮಸ್ಯೆ-ಶೋಷಣೆಗೆ ಒಳಗಾದವರ ಮಾಹಿತಿ ಸಂಗ್ರಹಿಸಲಾಗುತ್ತದೆ. ಇದಕ್ಕಾಗಿ ಪ್ರತಿ ಜಿಲ್ಲೆಯಲ್ಲಿ ರೈತರು, ವಕೀಲರು ಸೇರಿ ಪ್ರಮುಖರುಳ್ಳ 5 ಜನರ ತಂಡ ರಚಿಸಿದ್ದೇವೆ ಎಂದರು.

ಡಿಸೆಂಬರ್ ಆರಂಭದಲ್ಲಿ ಪ್ರವಾಸ :

ಈಗಾಗಲೇ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಪ್ರತಿಪಕ್ಷದ ನಾಯಕರಾದ ಆರ್.ಅಶೋಕ ಮತ್ತು ಛಲವಾದಿ ನಾರಾ ಯಣ ಸ್ವಾಮಿ ನೇತೃತ್ವದಲ್ಲಿ ರಚಿಸಿರುವ 3 ತಂಡಗಳು ಡಿಸೆಂಬರ್ ಮೊದಲ ವಾರದಲ್ಲಿ ರಾಜ್ಯಾದ್ಯಂತ ಪ್ರವಾಸ ಮಾಡಲಿವೆ. ರೈತರು, ಮಠಾಧೀಶರು ಸೇರಿ ತೊಂದರೆಗೊಳಗಾದವರಿಂದ ಮಾಹಿತಿ ಪಡೆಯಲಿವೆ. ಚಳಿಗಾಲದ ಅಧಿವೇಶನದಲ್ಲಿ ವಿವರ ಮಂಡಿಸಿ, ಜನರ ಸಮಸ್ಯೆ ಪರಿಹಾರಕ್ಕೆ ಪ್ರಾಮಾಣಿಕ ಪ್ರಯತ್ನ ಮಾಡಲಿದ್ದೇವೆ ಎಂದು ವಿವರಿಸಿದರು.

   

Related Articles

error: Content is protected !!