Home » ಬಿಜೆಪಿ ಬಣಜಗಳ ದೆಹಲಿಗೆ
 

ಬಿಜೆಪಿ ಬಣಜಗಳ ದೆಹಲಿಗೆ

ಅಮಿತ್‌ ಶಾಗೆ ದೂರು

by Kundapur Xpress
Spread the love

 ನವದೆಹಲಿ : ರಾಜ್ಯ ಬಿಜೆಪಿಯಲ್ಲಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹಾಗೂ ವಿಜಯಪುರ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್ ಬಣಗಳ ನಡುವಿನ ಬಡಿದಾಟ ತಾರಕಕ್ಕೇರಿರುವ ಬೆನ್ನಹಿಂದೆಯೇ ಈ ಬಣ ಜಗಳದ ವಿರುದ್ಧ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ನೇತೃತ್ವದ ಸಂಸದರ ತಂಡವೊಂದು ಶನಿವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ದೂರು ನೀಡಿದೆ ಹೈಕಮಾಂಡ್ ಮಧ್ಯ ಪ್ರವೇಶಿಸಿ, ಈ ಬಣ ಜಗಳ ನಿಲ್ಲಿಸಬೇಕು ಎಂದು ಮನವಿ ಮಾಡಿದೆ.

ಪ್ರಹ್ಲಾದ್‌ ಜೋಶಿ ನೇತೃತ್ವದಲ್ಲಿ ಈರಣ್ಣ ಕಡಾಡಿ, ಬಿ.ವೈ.ರಾಘವೇಂದ್ರ, ಜಗದೀಶ್ ಶೆಟ್ಟರ್‌ ಸೇರಿ ವಿವಿಧ ಸಂಸದರು ದೆಹಲಿಯಲ್ಲಿ ಶನಿವಾರ ಅಮಿತ್ ಶಾರನ್ನು ಭೇಟಿ ಮಾಡಿದರು. ಯತ್ನಾಳ್ ಹಾಗೂ ವಿಜಯೇಂದ್ರ ಅವರ ಎರಡೂ ಬಣಗಳ ನಡುವಿನ ಹೇಳಿಕೆ ಪ್ರತಿ ಹೇಳಿಕೆಗಳು ದಿನೇ ದಿನೇ ಹೆಚ್ಚಾಗುತ್ತಿವೆ  ಇಬ್ಬರೂ ನಾಯಕರು ತಾವು ಯಾರಿಗೂ ಕಡಿಮೆ ಇಲ್ಲ ಎನ್ನುವ ರೀತಿಯಲ್ಲಿ ಬೀದಿ ಜಗಳಕ್ಕೆ ನಿಂತಿದ್ದಾರೆ. ಇದರಿಂದ ಪಕ್ಷದ ವರ್ಚಸ್ಸು ಕುಂದುತ್ತಿದೆ. ಕಾರ್ಯಕರ್ತರಿಗೆ, ಜನರಿಗೆ ತಪ್ಪು ಸಂದೇಶ ರವಾನೆಯಾಗುತ್ತಿದೆ. ಈ ಸಮಸ್ಯೆಯನ್ನು ಆದಷ್ಟು ಬೇಗ ಬಗೆಹರಿಸಿ ಎಂದು ಮನವಿ ಮಾಡಿದರು.

ಇನ್ನೇನು ಒಂದೆರಡು ತಿಂಗಳಲ್ಲಿ ಜಿಲ್ಲಾ ಪಂಚಾಯತಿ, ತಾಲೂಕು ಪಂಚಾಯಿತಿ ಚುನಾವಣೆಗಳು ಬರಲಿವೆ. ಹೀಗಾಗಿ, ಬಣ ಜಗಳ ಇತ್ಯರ್ಥ ಮಾಡುವ ಬಗ್ಗೆ ತಕ್ಷಣ ಗಮನ ಹರಿಸಿ ಎಂದು ನಿಯೋಗ ಕೋರಿತು. ಸುಮಾರು ಅರ್ಧ ಗಂಟೆಗೂ ಹೆಚ್ಚು ಕಾಲ ಸಂಸದರ ಅಹವಾಲು ಆಲಿಸಿದ ಶಾ, ಪಕ್ಷದಲ್ಲಿ ಉಂಟಾಗಿರುವ ಬಣ ಜಗಳಕ್ಕೆ ಕಡಿವಾಣ ಹಾಕುವುದಾಗಿ ಸಂಸದರ ನಿಯೋಗಕ್ಕೆ ಭರವಸೆ ನೀಡಿದರು.

 

Related Articles

error: Content is protected !!