44
ಬೆಂಗಳೂರು : ಪಕ್ಷ ವಿರೋಧಿ ಚಟುವಟಿಕೆ ನಡೆಸುತ್ತಿರುವವರನ್ನು ಕೇಂದ್ರ ವರಿಷ್ಠರು ಮುಲಾಜಿಲ್ಲದೆ ಉಚ್ಚಾಟಿಸಬೇಕು. ಇಲ್ಲದಿದ್ದರೆ ಕಾರ್ಯಕರ್ತರಿಗೆ ತಪ್ಪು ಸಂದೇಶ ಹೋಗುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಪರವಾಗಿರುವ ಮಾಜಿ ಸಚಿವರು, ಶಾಸಕರ ಬಣ ಒತ್ತಾಯಿಸಿದೆ.
ಪಕ್ಷದ ಭಿನ್ನಮತೀಯ ಮುಖಂಡರಿಗೆ ದೆಹಲಿಯಲ್ಲಿ ರಾಷ್ಟ್ರೀಯ ನಾಯಕರಾದ ಜೆ.ಪಿ.ನಡ್ಡಾ, ಅಮಿತ್ ಶಾ ಮತ್ತಿತರನ್ನು ಭೇಟಿಯಾಗಲು ಸಾಧ್ಯವಾಗಿಲ್ಲ ಭೇಟಿ ಮಾಡಿದ್ದರೆ ಫೋಟೋ ಬಿಡುಗಡೆ ಮಾಡಲಿ ಎಂದು ಸವಾಲನ್ನೂ ಎಸೆದಿದೆ.
ಬುಧವಾರ ಮಾಜಿ ಸಚಿವ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ನಿವಾಸದಲ್ಲಿ ಸಭೆ ನಡೆಸಿದ ಮಾಜಿ ಸಚಿವ ಎಂ. ಪಿ.ರೇಣುಕಾಚಾರ್ಯ, ಮಾಜಿ ಶಾಸಕರಾದ ಸಂಪಂಗಿ, ಎಂ.ಡಿ.ಲಕ್ಷ್ಮೀನಾರಾಯಣ ಮತ್ತಿತರರು, ಪಕ್ಷವಿರೋಧಿ ಚಟುವಟಿಕೆ ನಡೆಸಿ ಕಾರ್ಯಕರ್ತರಲ್ಲಿ ಗೊಂದಲ ಉಂಟು ಮಾಡುತ್ತಿರುವ ಭಿನ್ನಮತೀಯರನ್ನು ತಕ್ಷಣ ಉಚ್ಚಾಟಿಸಬೇಕು ಎಂಬ ನಿರ್ಣಯ ಕೈಗೊಂಡರು.
![](https://kundapurxpress.com/wp-content/uploads/2025/02/WhatsApp-Image-2025-02-05-at-12.29.39-PM.jpeg)
![](https://kundapurxpress.com/wp-content/uploads/2024/11/IMG-20241128-WA0000.jpg)