ಬೆಂಗಳೂರು : ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಪಕ್ಷದ ಕೇಂದ್ರ ಶಿಸ್ತು ಸಮಿತಿ ಶೋಕಾಸ್ ನೋಟಿಸ್ ನೀಡಿದ್ದರಿಂದ ರಾಜ್ಯ ಬಿಜೆಪಿಯಲ್ಲಿನ ಭಿನ್ನಮತ ಇನ್ನೇನು ಮುಗಿಯಿತು ಎಂದುಕೊಳ್ಳುವಷ್ಟರಲ್ಲಿ ಇದೀಗ ಮತ್ತೆ ಸಕ್ರಿಯವಾಗಿದೆ.
ಈ ತಿಂಗಳ 20ರೊಳಗಾಗಿ (ಗುರುವಾರ) ಗೊಂದಲ ಬಗೆಹರಿಯಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಕ್ಷ ಬಿ.ವೈ.ವಿಜಯೇಂದ್ರ ಹೇಳಿಕೆ ಕೊಟ್ಟ ಹಿನ್ನೆಲೆಯಲ್ಲಿ ಗುರುವಾರವೇ ಯತ್ನಾಳ್ ನೇತೃತ್ವದಲ್ಲಿ ಭಿನ್ನರು ಸಭೆ ನಡೆಸುವ ಮೂಲಕ ಸಡ್ಡು ಹೊಡೆದಿದ್ದಾರೆ.
ಈ ಮೂಲಕ ನೋಟಿಸ್ ನೀಡಿದರೂ ವಿಜಯೇಂದ್ರ ಬದಲಾವಣೆ ಮಾಡಬೇಕು ಎಂಬ ತಮ್ಮ ಬೇಡಿಕೆಯ ವಿಚಾರದಲ್ಲಿ ಹಿಂದೇಟು ಹಾಕುವ ಪ್ರಶ್ನೆಯೇ ಇಲ್ಲ ಎನ್ನುವ ಸ್ಪಷ್ಟ ಸಂದೇಶವನ್ನು ಭಿನ್ನರು ನೀಡಿದ್ದಾರೆ. ಇದೇ ವೇಳೆ ಬಸನಗೌಡ ಪಾಟೀಲ್ ಯತ್ನಾಳ್ ಪರ ಗಟ್ಟಿಯಾಗಿ ನಿಲ್ಲುತ್ತೇವೆ ನೋಟಿಸ್‌ಗೆ ಹೆದರುವುದಿಲ್ಲ ಎಂಬ ತಿರುಗೇಟು ಕೊಡುವಲ್ಲೂ ಭಿನ್ನರು ಯಶಸ್ವಿಯಾಗಿದ್ದಾರೆ.
ಕುಮಾರ್ ಮನೆಯಲ್ಲಿ ಸಭೆ :
ಸದಾಶಿವನಗರದಲ್ಲಿನ ಮಾಜಿ ಸಚಿವ ಕುಮಾರ್‌ಬಂಗಾರಪ್ಪ ನಿವಾಸದಲ್ಲಿ ಬಂಡಾಯ ನಾಯಕರೆಲ್ಲ ಸಭೆ ‘ ನಡೆಸಿದರು. ಈ ವೇಳೆ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಪಕ್ಷದ ವರಿಷ್ಠರು ನೋಟಿಸ್ ಜಾರಿಗೊಳಿಸಿರುವ ಕುರಿತು ಚರ್ಚೆ ನಡೆಸಿದರು ಎಂದು ತಿಳಿದು ಬಂದಿದೆ

