ಬೆಂಗಳೂರು : ರಾಜ್ಯ ಸರಕಾರ ಪೆಟ್ರೋಲ್- ಡೀಸೆಲ್ ಬೆಲೆ ಏರಿಕೆಯ ಭಂಡತನದ ನಿರ್ಧಾರವನ್ನು ಕೈಬಿಡಬೇಕು. ಅಲ್ಲಿವರೆಗೂ ನಮ್ಮ ಹೋರಾಟ ನಿರಂತರವಾಗಿ ಮುಂದು ವರೆಯುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೆಂದ್ರ ಹೇಳಿದರು.
ಬೆಂಗಳೂರಿನ ಜಗನ್ನಾಥ ಭವನದ ಬಳಿ ನಡೆದ ಸೈಕಲ್ ಜಾಥದ ನೇತೃತ್ವ ವಹಿಸಿ ಮಾತನಾಡಿದ ಅವರು, ಈಗ ತೈಲ ಬೆಲೆ ಏರಿಸಿದ ಸರ್ಕಾರ, ಇನ್ನುಮುಂದೆ ಬಸ್ ಪ್ರಯಾಣ ದರ, ವಿದ್ಯುತ್ ದರ ಸೇರಿದಂತೆ ಎಲ್ಲವನ್ನೂ ಹೆಚ್ಚು ಮಾಡಲು ಹೊರಟಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನೆ ವೇಳೆ ಶಾಸಕ ಡಾ.ಸಿ.ಎನ್.ಅಶ್ವತ್ಥ ನಾರಾಯಣ, ವಿಧಾನ ಪರಿಷತ್ ಸದಸ್ಯರಾದ ಸಿ.ಟಿ.ರವಿ, ಛಲವಾದಿ ನಾರಾಯಣಸ್ವಾಮಿ ಉಪಸ್ಥಿತರಿದ್ದರು