Home » ರಾಜ್ಯ ಸಂಚಾಲಕರಾಗಿ ಬೇಳೂರು ರಾಘವೇಂದ್ರ ಶೆಟ್ಟಿ ಆಯ್ಕೆ
 

ರಾಜ್ಯ ಸಂಚಾಲಕರಾಗಿ ಬೇಳೂರು ರಾಘವೇಂದ್ರ ಶೆಟ್ಟಿ ಆಯ್ಕೆ

ರಾಜ್ಯ ಬಿಜೆಪಿ ಹಾಲು ಉತ್ಪಾದಕರ ಪ್ರಕೋಷ್ಠ

by Kundapur Xpress
Spread the love

ಕೋಟ : ರಾಜ್ಯ ಬಿಜೆಪಿಯ ಕೇಂದ್ರ ಕಚೇರಿ ಜಗನ್ನಾಥ ಭವನದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹಾಗೂ ರಾಜ್ಯ ಪ್ರಕೋಷ್ಠಗಳ ಸಂಯೋಜಕರು ದತ್ತಾತ್ರೇಯರ ಶಿಫಾರಸಿನ ಅನ್ವಯ ಬೇಳೂರು ರಾಘವೇಂದ್ರ ಶೆಟ್ಟಿ ಇವರನ್ನು ರಾಜ್ಯ ಹಾಲು ಉತ್ಪಾದಕರ ಪ್ರಕೋಷ್ಠದ ರಾಜ್ಯ ಸಂಚಾಲಕರನ್ನಾಗಿ ನೇಮಕ ಮಾಡಿ ಬುಧವಾರ ಆದೇಶ ಹೊರಡಿಸಿದೆ.
ಪ್ರಸ್ತುತ ಬೆಂಗಳೂರಿನಲ್ಲಿ ನೆಲೆಸಿರುವ ರಾಘವೇಂದ್ರ ಶೆಟ್ಟಿ ಮೂಲತಃ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಬೇಳೂರು ನಿವಾಸಿಯಾಗಿದ್ದು ಈ ಹಿಂದೆ ರಾಜ್ಯ ಬಿಜೆಪಿ ಕಾರ್ಯದರ್ಶಿಯಾಗಿ , ಲೋಕಸಭಾ ಚುನಾವಣಾ ಸಂದರ್ಭದಲ್ಲಿ ಸೋಶಿಯಲ್ ಮೀಡಿಯಾದ ರಾಜ್ಯ ಸಹ ಉಸ್ತುವಾರಿಯಾಗಿ ಮತ್ತು ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಎಲ್ಲಾ ಮೋರ್ಚಾಳ ಪ್ರಮುಖರಾಗಿ ಅವಕಾಶ ಕಲ್ಪಿಸಿದ್ದು ಹಿಂದಿನ ರಾಜ್ಯ ಬಿಜೆಪಿ ಸರ್ಕಾರದಲ್ಲಿ ಸಚಿವ ಸಂಪುಟ ದರ್ಜೆಯ ಕರಕುಶಲ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಲು ಅವಕಾಶ ಕಲ್ಪಿಸಿದೆ.

   

Related Articles

error: Content is protected !!