ಬೆಂಗಳೂರು : ದೇವಾಲಯ-ಮಠಗಳ ರೈತರ ಜಮೀನನ್ನು ವಕ್ಸ್ ಮಂಡಳಿ ಕಬಳಿಸಿದ್ದನ್ನು ಖಂಡಿಸಿ ರಾಜ್ಯಾದ್ಯಂತ ಜಿಲ್ಲಾ ಕೇಂದ್ರಗಳಲ್ಲಿ ಬಿಜೆಪಿಯು ನಮ್ಮ ಭೂಮಿ ನಮ್ಮ ಹಕ್ಕು ಅಭಿಯಾನದಲ್ಲಿ ಶುಕ್ರವಾರ ಬೃಹತ್ ಪ್ರತಿಭಟನೆ ನಡೆಸಿತು.
ಕಲಬುರಗಿ, ವಿಜಯಪುರ, ಕೊಪ್ಪಳ, ಗದಗ, ದಕ್ಷಿಣ ಕನ್ನಡ, ಸೇರಿದಂತೆ ರಾಜ್ಯಾದ್ಯಂತ ಬಿಜೆಪಿ ಕಾರ್ಯಕರ್ತರು ಧರಣಿ ನಡೆಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವ ಜಮೀರ್ ಅಹ್ಮದ್ ಖಾನ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ಸಂತ್ರಸ್ತರ ಅಹವಾಲು ಮತ್ತು ಮನವಿಗಳನ್ನೂ ಸ್ವೀಕರಿಸಲಾಯಿತು.
ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ನಡೆದ ಧರಣಿಯಲ್ಲಿ ಪಾಲ್ಗೊಂಡ ವಿಧಾನಸಭೆ ಪ್ರತಿಪಕ್ಷ ನಾಯಕ ಆರ್. ಅಶೋಕ ಮಾತನಾಡಿ, ವಕ್ಸ್ ವಿಚಾರವಾಗಿ ಜನರು ದಂಗೆ ಏಳುವ ಪರಿಸ್ಥಿತಿ ಕರ್ನಾಟಕದಲ್ಲಿದೆ. ಆದರೆ,. ಸಿದ್ದರಾಮಯ್ಯ ಪಿಟೀಲು ಬಾರಿಸಿಕೊಂಡು ಕುಳಿತಿದ್ದಾರೆ. ರೈತರ ಜಮೀನು ಕಿತ್ತುಕೊಳ್ಳುವುದು ಕಾಂಗ್ರೆಸ್ ಸಚಿವರಿಗೆ ಸಣ್ಣ ವಿಚಾರ ಎನಿಸಿದೆ ಎಂದು ಆಕ್ಷೇಪ ವ್ಯಕ್ತಪಡಿಸಿದರು.