Home » ಬಿಜೆಪಿ ಅಹೋರಾತ್ರಿ ಧರಣಿ
 

ಬಿಜೆಪಿ ಅಹೋರಾತ್ರಿ ಧರಣಿ

ಬೆಲೆ ಎರಿಕೆ ವಿರುದ್ದು ಬಿಜೆಪಿ ನಾಯಕರ ಆಕ್ರೋಶ

by Kundapur Xpress
Spread the love

ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರದ ಬೆಲೆ ಏರಿಕೆ ಖಂಡಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಸರ್ಕಾರದ ವಿರುದ್ಧ ಅಹೋರಾತ್ರಿ ಧರಣಿ ನಡೆ ಸುವ ಮೂಲಕ ಪ್ರತಿಪಕ್ಷ ಬಿಜೆಪಿ ಜನಾಕ್ರೋಶದ ಕಹಳೆ ಮೊಳಗಿಸಿದೆ. ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕೂಡ ಧರಣಿಯಲ್ಲಿ ಭಾಗಿಯಾಗಿ ಹೋರಾಟಕ್ಕೆ ಹುಮ್ಮಸ್ಸು ಮೂಡಿಸಿದ್ದಾರೆ.

ಬೆಲೆ ಏರಿಕೆ ವಿರುದ್ಧ ಬುಧವಾರ ಮಧ್ಯಾಹ್ನದಿಂದ ಅಹೋರಾತ್ರಿ ಧರಣಿ ಆರಂಭಿಸಿದ್ದು, ಇದು ಗುರುವಾರ ಮಧ್ಯಾಹ್ನದವರೆಗೂ ಮುಂದುವರೆಯಲಿದೆ. ಬಳಿಕ ಇದೇ ತಿಂಗಳ 5ರಂದು ರಾಜ್ಯಾದ್ಯಂತ ಜಿಲ್ಲಾ ಮತ್ತು ತಾಲೂಕು ಕೇಂದ್ರಗಳಲ್ಲಿ ಬೆಲೆ ಏರಿಕೆ ವಿರುದ್ಧ ಪ್ರತಿಭಟನೆ ನಡೆಸಲಿದೆ. ಬಳಿಕ 7ರಿಂದ ಬೆಲೆ ಏರಿಕೆ ಕುರಿತು ಜನಜಾಗೃತಿ ಮೂಡಿಸುವ ಸಲುವಾಗಿ ಬಿಜೆಪಿಯು ಜನಾಕ್ರೋಶ ಯಾತ್ರೆ ಆರಂಭಿಸಲಿದೆ.

ಹಾಲು, ಮೊಸರು, ವಿದ್ಯುತ್, ಡೀಸೆಲ್ ದರ, ಕಸ ತೆರಿಗೆ ಹೀಗೆ ಒಂದರ ಹಿಂದೆ ಒಂದರಂತೆ ದರ ಏರಿಕೆಗೆ ಪ್ರತಿಪಕ್ಷ ಬಿಜೆಪಿ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ

 

Related Articles

error: Content is protected !!