ಬೆಂಗಳೂರು : ಉತ್ತರ ಕರ್ನಾಟಕದಲ್ಲಿ ಪ್ರತ್ಯೇಕ ಪಾದಯಾತ್ರೆಗೆ ಪಕ್ಷದ ವರಿಷ್ಠರು ಅನುಮತಿ ನೀಡಿದರೆ ನನ್ನದೇನು ತಕರಾರು ಇಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ. ‘ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷದ ಕೆಲವರು ಪಾದಯಾತ್ರೆ ಮಾಡುವ ಅಪೇಕ್ಷೆ ವ್ಯಕ್ತಪಡಿಸಿದ್ದಾರೆ.ಇದರಿಂದ ಪಕ್ಷಕ್ಕೆ ಶಕ್ತಿ ಸಿಗುವುದಾದರೆ, ವರಿಷ್ಠರು ಅನುಮತಿ ನೀಡಿದರೆ ನನ್ನದೇನು ತಕರಾರು ಇಲ್ಲ. ವರಿಷ್ಠರು ಅನುಮತಿ ನೀಡಿದರೆ ಮಾತ್ರ ಪಾದಯಾತ್ರೆ ಮಾಡಲು ಅವರು ಸ್ವತಂತ್ರರು. ಆದರೆ, ಆ ಪಾದಯಾತ್ರೆ ಪಕ್ಷಕ್ಕೆ ಪೂರಕವಾಗಿರಬೇಕು ಮತ್ತು ಪಕ್ಷ ಸಂಘಟನೆಗೆ ಲಾಭದ ಸದುದ್ದೇಶ ಇರಬೇಕು ಎಂದು ಅಭಿಪ್ರಾಯಪಟ್ಟರು.