Home » ರಾಜ್ಯಾಧ್ಯಕ್ಷ ಹುದ್ದೆ : ಫೆ. 20ರೊಳಗೆ ಉತ್ತರ
 

ರಾಜ್ಯಾಧ್ಯಕ್ಷ ಹುದ್ದೆ : ಫೆ. 20ರೊಳಗೆ ಉತ್ತರ

by Kundapur Xpress
Spread the love

ತುಮಕೂರು : ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ಕುರಿತು ಫೆ.20ರೊಳಗೆ ಉತ್ತರ ಸಿಗಲಿದೆ. ಈ ಬಗ್ಗೆ ನಾನು ಹಿಂದೆಯೇ ಹೇಳಿದ್ದೇನೆ. ಜಿಲ್ಲಾಧ್ಯಕ್ಷರ ನೇಮಕ ಪ್ರಕ್ರಿಯೆ ದೆಹಲಿಯಲ್ಲಿ ನಡೆಯುತ್ತಿದ್ದು, ಜಿಲ್ಲಾಧ್ಯಕ್ಷರ ನೇಮಕಾತಿ ಆದ ಮೇಲೆ ರಾಜ್ಯಾಧ್ಯಕ್ಷರ ವಿಚಾರ ಗೊತ್ತಾಗಲಿದೆ ಎಂದು ಬಿಜೆಪಿ  ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸ್ಪಷ್ಟಪಡಿಸಿದ್ದಾರೆ.

ತುಮಕೂರು ಸಮೀಪದ ಬೆಳ್ಳಾವಿಕಾರದ ಮಠದಲ್ಲಿ ಶ್ರೀಗಳ ಗದ್ದುಗೆ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಭಾಗಿಯಾಗುವುದಕ್ಕೂ ಮುನ್ನ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಯಾವಾಗ ಬೇಕಾದರೂ ಕೇಂದ್ರದ ವರಿಷ್ಠರು ರಾಜ್ಯಕ್ಕೆ ಬರಬಹುದು. ಎಲ್ಲಾ ಶಾಸಕರ ಜೊತೆ ಚರ್ಚಿಸಿ, ರಾಜ್ಯಾಧ್ಯಕ್ಷರ ಬಗ್ಗೆ ಅವರು ಅಂತಿಮ ನಿರ್ಧಾರ ಕೈಗೊಳ್ಳುತ್ತಾರೆ ಎಂದು ತಿಳಿಸಿದರು.

 

Related Articles

error: Content is protected !!