ಬೆಂಗಳೂರು : ಡೀಸೆಲ್, ಪೆಟ್ರೋಲ್ ದರ ಹೆಚ್ಚಳ ಮಾಡಿದ ರಾಜ್ಯ ಸರ್ಕಾರದ ಕ್ರಮ ವಿರೋಧಿಸಿ ಸೋಮವಾರ ಬಿಜೆಪಿ ಯಿಂದರಾಜ್ಯಾದ್ಯಂತ ಪ್ರತಿಭಟನೆ ನಡೆಸಲಾಯಿತು. ತೆಂಗಿನ ಚಿಪ್ಪು, ಖಾಲಿ ಚೊಂಬು ಪ್ರದರ್ಶಿಸಿ, ಎತ್ತಿನಗಾಡಿ ಮೇಲೆ ಬೈಕ್ ಇಟ್ಟು ಎಳೆದುಕೊಂಡು ಹೋಗುವ ಮೂಲಕ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಲಾಯಿತು.
ಬೆಂಗಳೂರಿನ ಫ್ರೀಡಂಪಾರ್ಕ್ನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ನಡೆದ ಬೃಹತ್ ಪ್ರತಿಭಟನೆಯಲ್ಲಿ ಪ್ರತಿಪಕ್ಷನಾಯಕ ಆರ್.ಅಶೋಕ್, ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಮತ್ತಿತರ ನಾಯಕರು ಪಾಲ್ಗೊಂಡಿದ್ದರು. ಪ್ರತಿ ಭಟನಾ ಸ್ಥಳಕ್ಕೆ ಎತ್ತಿನಗಾಡಿಯಲ್ಲಿ ಆಗಮಿಸಿ ಸರ್ಕಾ ರದ ವಿರುದ್ಧ ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ತೈಲ ಬೆಲೆ ಏರಿಕೆ ರಾಜ್ಯ ಸರ್ಕಾರದ ಜನವಿರೋಧಿ ತೀರ್ಮಾನ ಎಂದು ಬಿಜೆಪಿ ನಾಯಕರು ಆಕ್ರೋಶ ವ್ಯಕ್ತಪಡಿಸಿದರು