ಬೆಂಗಳೂರು : ಕೇಂದ್ರ ಭಾರೀ ಕೈಗಾರಿಕಾ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರನ್ನು ಕರಿಯ ಎಂದವರ ವಿರುದ್ಧ ಕ್ರಮ ಕೈಗೊಂಡಿಲ್ಲ. ವಿಧಾನಸೌಧದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಎಂದರೂ ಅವರನ್ನು ಏನೂ ಮಾಡಿಲ್ಲ. ಆದರೆ ತಮ್ಮ ವಿರುದ್ಧ ಮಾತ್ರ ಪ್ರಕರಣ ದಾಖಲು ಮಾಡುತ್ತಾರೆ ಎಂದು ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಕುಮಾರ ಚಂದ್ರಶೇಖರನಾಥ ಸ್ವಾಮೀಜಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಮುಸ್ಲಿಮರಿಗೆ ಮತದಾನದ ಹಕ್ಕು ನೀಡಬಾರದು ಎಂದು ಹೇಳಿದ್ದಕ್ಕೆ ಉಪ್ಪಾರಪೇಟೆ ಠಾಣೆ ಪೊಲೀಸರು ನೋಟಿಸ್ ನೀಡಿದ ಹಿನ್ನೆಲೆಯಲ್ಲಿ ಅವರು ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದರು.
ಕುಮಾರಸ್ವಾಮಿ ವಿಷಯ, ಪಾಕಿಸ್ತಾನ್ ಜಿಂದಾಬಾದ್ ಸೇರಿ ಎಂತೆಂಥ ವಿಷಯಗಳಾಗಿಲ್ಲ ಆ ಸಂಬಂಧ ಯಾವುದೇ ಕ್ರಮ ಕೈಗೊಂಡಿಲ್ಲ ತಮಗೆ ಹುಷಾರಿಲ್ಲ ನಡೆಯಲೂ ಆಗುವುದಿಲ್ಲ ಎಂದು ಕ್ಷಮೆ ಕೇಳಿದರೂ ಈ ವಯಸ್ಸಿನಲ್ಲಿ ಕೇಸ್ ಹಾಕುತ್ತಾರೆ. ಪೊಲೀಸರು ನೋಟಿಸ್ ನೀಡಿದ್ದು ತಮಗೆ ಹೋಗಲು ಸಾಧ್ಯವಿಲ್ಲ ಅವಶ್ಯವಿದ್ದರೆ ಮಠಕ್ಕೆ ಬಂದು ಹೇಳಿಕೆ ಪಡೆಯಲಿ ಎಂದು ಸ್ವಾಮೀಜಿ ಸ್ಪಷ್ಟಪಡಿಸಿದರು.