124
ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸ್ವೀಟ್ -16 ಬಜೆಟ್ ಮಂಡನೆಗೆ ಸಜ್ಜಾಗಿದ್ದು, ಈ ಬಾರಿಯ ಬಜೆಟ್ ಜನತೆಯ ಪಾಲಿಗೆ ಸಿಹಿ ಆಗುತ್ತಾ ಅಥವಾ ಕಹಿ ನೀಡುತ್ತಾ ಎಂಬುದು ಇಂದು ಶುಕ್ರವಾರ ಬಜೆಟ್ ಮಂಡನೆ ಬಳಿಕ ತಿಳಿಯಲಿದೆ.
ಶುಕ್ರವಾರ ಬೆಳಗ್ಗೆ 10.15 ಗಂಟೆಗೆ ಸಿದ್ದರಾಮಯ್ಯ ತಮ್ಮ ದಾಖಲೆಯ 16ನೇ ಬಜೆಟ್ ಮಂಡಿಸುತ್ತಿದ್ದು, ಬಜೆಟ್ ಗಾತ್ರ 4 ಲಕ್ಷ ಕೋಟಿ ರು. ದಾಟುವ ನಿರೀಕ್ಷೆಯಿದೆ. ಕಾಲುನೋವಿನಿಂದ ಬಳಲುತ್ತಿ ರುವ ಸಿದ್ದರಾಮಯ್ಯ ಅವರು, ವೀಲ್ ಚೇರ್ ನಲ್ಲೇ ಕೂತು ಬಜೆಟ್ ಮಂಡಿಸಲಿದ್ದಾರೆ.
ಬಜೆಟ್‌ನಲ್ಲಿ ಜನತೆ ಪಾಲಿಗೆ ಸಿಹಿ ಮಾತ್ರ ನೀಡಬೇಕು ಎಂಬ ಉದ್ದೇಶವಿದ್ದರೂ ಗ್ಯಾರಂಟಿಗಳ ಹೊರೆ, ಬದ್ಧತಾ ವೆಚ್ಚ ಹೆಚ್ಚಳ, ಸಾಲದ ಹೊರೆ ನಡುವೆಯೂ ಅಭಿವೃದ್ಧಿಗೆ ಒತ್ತು ನೀಡಬೇಕಾದ ಅನಿವಾರ್ಯತೆ ಇದೆ. ಹೀಗಾಗಿ ಸವಾಲಿನ ಬಜೆಟ್ ಮಂಡಿಸುತ್ತಿರುವ ಸಿದ್ದರಾಮಯ್ಯ ಸ್ವಲ್ಪ ಕಹಿ ಅನುಭವವನ್ನೂ ನೀಡಲಿದ್ದಾರಾ ಎಂಬುದನ್ನು ನೋಡಬೇಕಿದೆ.

