Home » ಇಂದು ದ್ವಿತೀಯ ಪಿಯು ಫಲಿತಾಂಶ
 

ಇಂದು ದ್ವಿತೀಯ ಪಿಯು ಫಲಿತಾಂಶ

by Kundapur Xpress
Spread the love

ಬೆಂಗಳೂರು : 2025ರ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಇಂದು ಮಂಗಳವಾರ ಪ್ರಕಟವಾಗಲಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಹೇಳಿದೆ. ದ್ವಿತೀಯ ಪಿಯುಸಿ ಪರೀಕ್ಷೆ-1, ಮಾ.1 ರಿಂದ 20ರವರೆಗೆ ನಡೆದಿದ್ದು, ಎಲ್ಲ ವಿಷಯಗಳ ಉತ್ತರ ಪತ್ರಿಕೆಗಳ ಮೌಲ್ಯ ಮಾಪನ ಕಾರ್ಯ ಮುಕ್ತಾಯವಾಗಿದೆ. ಫಲಿತಾಂಶವನ್ನು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸಚಿವ ಮಧು ಬಂಗಾರಪ್ಪ ಮಂಗಳವಾರ ಮಧ್ಯಾಹ್ನ 12.30ಕ್ಕೆ ಸಾಂಕೇತಿಕವಾಗಿ ಪ್ರಕಟಿಸಲಿದ್ದು, ಮಧ್ಯಾಹ್ನ 1.30ರ ನಂತರ https://karresults.nic.in  ಫಲಿತಾಂಶ ರಾಜ್ಯದ ಎಲ್ಲ ವಿದ್ಯಾರ್ಥಿಗಳಿಗೆ ಲಭ್ಯವಾಗಲಿದೆ.

 

Related Articles

error: Content is protected !!