ಚೆನ್ನೈ : ಮೈಸೂರಿನಿಂದ ಬಿಹಾರದ ದರ್ಭಂಗಾಕ್ಕೆ ಅ.11ರಂದು ತೆರಳುತ್ತಿದ್ದ ಬಾಗೃತಿ ಎಕ್ಸ್‌ಪ್ರೆಸ್ ರೈಲು ಮುಖ್ಯ ಮಾರ್ಗ ಬದಲಿಸಿ ಪಕ್ಕದ ಮಾರ್ಗದಲ್ಲಿ ನಿಂತಿದ್ದ ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದಿದ್ದರ ಹಿಂದೆ ವಿಧ್ವಂಸಕ ಕೃತ್ಯ ಅಡಗಿದೆ ಎಂಬ ಆತಂಕಕಾರಿ ಸಂಗತಿ ರೈಲ್ವೆ ಇಲಾಖೆಯ ತನಿಖೆ ವೇಳೆ ಪತ್ತೆಯಾಗಿದೆ.
ದುರಂತ ಸಂಭವಿಸಿದ ಕವರೈ ಪೇಟೆ ನಿಲ್ದಾಣದ ಬಳಿ ಹಳಿಗೆ ಅಳವಡಿಸಲಾಗಿದ್ದ ನಟ್, ಬೋಲ್ಡ್‌ಗಳನ್ನು ಉದ್ದೇಶ ಪೂರ್ವಕವಾಗಿ ಕಳಚಲಾಗಿತ್ತು ಎಂಬ ಸಂಗತಿ ಬಯಲಾಗಿದೆ. ಬೆಂಗಳೂರಿನ ದಕ್ಷಿಣ ವೃತ್ತದ ರೈಲ್ವೆ ಸುರಕ್ಷತಾ ಆಯುಕ್ತ ಎ.ಎಂ.ಚೌಧರಿ ಅವರ ಎದುರು 15 ರೈಲ್ವೆ ಸಿಬ್ಬಂದಿ ವಿಚಾರಣೆಗೆ ಹಾಜರಾಗಿದ್ದರು