ಬೆಂಗಳೂರು : ದೇಶಾದ್ಯಂತ ಕಾಂಗ್ರೆಸ್ ಪಕ್ಷ ಹಾಗೂ ಇಂಡಿಯಾ ಮೈತ್ರಿಕೂಟದ ಪರ ಜನರಲ್ಲಿ ವಿಶ್ವಾಸ ಮೂಡುತ್ತಿದೆ. ಉತ್ತರ ಪ್ರದೇಶದಲ್ಲಿ 40ಕ್ಕೂ ಹೆಚ್ಚು ಸ್ಥಾನಗಳಲ್ಲಿ ಇಂಡಿಯಾ ಮೈತ್ರಿಕೂಟ ಗೆಲುವು ಸಾಧಿಸಲಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ವಿಧಾನಸೌಧ ಬಳಿ ಸುದ್ದಿಗಾರ ರೊಂದಿಗೆ ಮಾತನಾಡಿದ ಅವರು, ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ಕರ್ನಾಟಕ ಮಾದರಿಯಲ್ಲಿ ಗ್ಯಾರಂಟಿ ಯೋಜನೆಗಳ ಜತೆಗೆ ಬಡವರಿಗೆ 10 ಕೆ.ಜಿ ಉಚಿತ ಅಕ್ಕಿ ಯೋಜನೆ ಘೋಷಿಸಿದ್ದಾರೆ. ನಮ್ಮ ರಾಜ್ಯದಲ್ಲಿ ಹೇಗೆ ಕೊಟ್ಟ ಮಾತಿನಂತೆ ಗ್ಯಾರಂಟಿ ಯೋಜನೆ ಜಾರಿ ಮಾಡಿದ್ದೇವೋ, ಅದೇ ರೀತಿ ಇಂಡಿಯಾ ಒಕ್ಕೂಟ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದ ಬಳಿಕ ಕೊಟ್ಟ ಮಾತು ಉಳಿಸಿಕೊಳ್ಳಲಿದೆ. ಮೋದಿ ಅವರ ಆಡಳಿತದಿಂದ ಜನ ಬೇಸತ್ತಿದ್ದು ಜನಪರ ಸರ್ಕಾರ ಬಯಸಿದ್ದಾರೆ ಎಂದರು