Home » ಮುನಿರತ್ನಗೆ 14 ದಿನಗಳ ನ್ಯಾಯಾಂಗ ಬಂಧನ
 

ಮುನಿರತ್ನಗೆ 14 ದಿನಗಳ ನ್ಯಾಯಾಂಗ ಬಂಧನ

by Kundapur Xpress
Spread the love

ಬೆಂಗಳೂರು : ಜಾತಿ ನಿಂದನೆ, ಜೀವ ಬೆದರಿಕೆ ಆರೋಪದ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಮಾಜಿ ಸಚಿವ ಮುನಿರತ್ನ ಅವರನ್ನು ಸೆ.30ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿದೆ.

ಎರಡು ದಿನಗಳ ಪೊ ಲೀಸ್ ಕಸ್ಟಡಿ ಮುಕ್ತಾಯದ ಹಿನ್ನೆಲೆ ವೈಯಾಲಿಕಾವಲ್ ಪೊಲೀಸರು ಮಂಗಳವಾರ ಮಧ್ಯಾಹ್ನ ಆರೋಪಿ ಮುನಿರತ್ನ ಅವರನ್ನು ಜನಪ್ರತಿನಿಧಿ ಗಳ ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಿದರು. ವಿಸ್ತ್ರತ ತನಿಖೆಗಾಗಿ ಆರೋಪಿಯನ್ನು ವಶಕ್ಕೆ ನೀಡುವಂತೆ ಮನವಿ ಮಾಡಿದರು

ಈ ವೇಳೆ ಮುನಿರತ್ನ ಪರ ವಕೀಲರು ಜಾಮೀನು ಕೋರಿ ಅರ್ಜಿ ಸಲ್ಲಿಸಿ ವಾದ ಮಂಡನೆಗೆ ಅವಕಾಶ ಕೋರಿದರು. ಆದರೆ, ನ್ಯಾಯಾಧೀಶರು ಜಾಮೀನು ಅರ್ಜಿ ವಿಚಾರಣೆಯನ್ನು ಬುಧವಾರಕ್ಕೆ ಮುಂದೂಡಿ, ಆರೋಪಿಯನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಿ  ಆದೇಶಿಸಿದರು. ಇದರ ಬೆನ್ನಲ್ಲೇ ವೈಯಾಲಿ ಕಾವಲ್ ಠಾಣೆ ಪೊಲೀಸರು, ಆರೋಪಿ ಮುನಿರತ್ನ ಅವರನ್ನು ಬೌರಿಂಗ್ ಆಸ್ಪತ್ರೆಗೆ ಕರೆದೊಯ್ದು ನಿಯಮಾನುಸಾರ ವೈದ್ಯಕೀಯ ಪರೀಕ್ಷೆ ಮಾಡಿಸಿ, ಪರಪ್ಪನ ಅಗ್ರಹಾರದ ಕೇಂದ್ರ ಕಾರಾಗೃಹಕ್ಕೆ ಸೇರಿಸಿದ್ದಾರೆ.

   

Related Articles

error: Content is protected !!