Home » ಇ ಡಿ ಪ್ರಶ್ನೆಗಳಿಗೆ ಮೌನವೇ ಉತ್ತರ
 

ಇ ಡಿ ಪ್ರಶ್ನೆಗಳಿಗೆ ಮೌನವೇ ಉತ್ತರ

by Kundapur Xpress
Spread the love

ಬೆಂಗಳೂರು : ರಾಜ್ಯ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣ ಸಂಬಂಧ ವಿಚಾರಣೆ ವೇಳೆ ಜಾರಿ ನಿರ್ದೇಶನಾಲಯ(ಇ.ಡಿ.)ದ ಅಧಿಕಾರಿಗಳ ಪ್ರಶ್ನೆಗಳಿಗೆ ಮಾಜಿ ಸಚಿವ ಬಿ.ನಾಗೇಂದ್ರ ಸಮರ್ಪಕ ಉತ್ತರ ನೀಡುತ್ತಿಲ್ಲ ಎಂದು ತಿಳಿದು ಬಂದಿದೆ. ಇ.ಡಿ. ಅಧಿಕಾರಿಗಳು ಕಳೆದ ಮೂರು ದಿನಗಳಿಂದ ಬಿ.ನಾಗೇಂದ್ರ ಅವರನ್ನು ವಿಚಾರಣೆಗೆ ಒಳಪಡಿಸಿದ್ದಾರೆ. ಅಧಿಕಾರಿಗಳ ಪ್ರಶ್ನೆಗಳಿಗೆ ನಾಗೇಂದ್ರ ಸಮಪರ್ಕವಾಗಿ ಉತ್ತರಿಸದೆ ಮೌನಕ್ಕೆ ಜಾರುತ್ತಿದ್ದಾರೆ. ಆರಂಭದಲ್ಲಿ ಈ ಪ್ರಕರಣದಲ್ಲಿ ತಮ್ಮ ಪಾತ್ರವೇ ಇಲ್ಲ ಎಂದು ಒಂದು ಸಾಲಿನ ಉತ್ತರ ನೀಡಿದ್ದ ನಾಗೇಂದ್ರ, ಇ.ಡಿ. ಅಧಿಕಾರಿಗಳು ಕೆಲ ದಾಖಲೆಗಳನ್ನು ಮುಂದಿಟ್ಟು ಪ್ರಶ್ನೆ ಮಾಡಿದಾಗ ತಡಬಡಾಯಿಸಿದರು ಎಂದು ಮೂಲಗಳು ತಿಳಿಸಿವೆ.

ನಿಗಮದ ಹಣ ಲೋಕಸಭಾ ಚುನಾವಣೆಗೆ ಬಳಕೆಯಾಗಿರುವುದು ಮೇಲ್ನೋಟಕ್ಕೆ ಕಂಡುಬಂದಿರುವ ಹಿನ್ನೆಲೆಯಲ್ಲಿ ಇ.ಡಿ. ಅಧಿಕಾರಿಗಳು ಆ ಬಗ್ಗೆ ನಾಗೇಂದ್ರ ಅವರನ್ನು ಪ್ರಶ್ನಿಸಿದ್ದಾರೆ. ಈ ಪ್ರಶ್ನೆಗೂ ನಾಗೇಂದ್ರ ಮೌನ ಉತ್ತರ ನೀಡಿದ್ದಾರೆ. ಲೋಕಸಭಾ ಚುನಾವಣೆಗೂ ಮುನ್ನವೇ ಸಚಿವ ನಾಗೇಂದ್ರ, ನಿಗಮದ ವ್ಯವಸ್ಥಾಪಕ ಜೆ.ಜಿ.ಪದ್ಮನಾಭ ಸೇರಿ ಕೆಲವು ಅಧಿಕಾರಿಗಳ ಜತೆಗೆ ಖಾಸಗಿ ಹೋಟೆಲ್ವೊಂದರಲ್ಲಿ ರಹಸ್ಯ ಸಭೆ ನಡೆಸಿ, ನಿಗಮದ ಹಣವನ್ನು ನಕಲಿ ಖಾತೆಗಳಿಗೆ ವರ್ಗಾಯಿಸುವ ಬಗ್ಗೆ ಚರ್ಚಿಸಿರುವ ವಿಚಾರ ಬೆಳಕಿಗೆ ಬಂದಿದೆ. ಹೀಗಾಗಿ ಇ.ಡಿ. ಅಧಿಕಾರಿ ಗಳು ನಾಗೇಂದ್ರರನ್ನು ಈ ಬಗ್ಗೆಯೂ ಪ್ರಶ್ನಿಸಿದ್ದಾರೆ.

   

Related Articles

error: Content is protected !!