Home » ಅಕ್ರಮ ಹಣ : ಮದ್ಯ ಖರೀದಿಗೆ ಬಳಕೆ
 

ಅಕ್ರಮ ಹಣ : ಮದ್ಯ ಖರೀದಿಗೆ ಬಳಕೆ

by Kundapur Xpress
Spread the love

ನವದೆಹಲಿ : ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನಕ್ಕೆ ಕಾರಣವಾಗಿರುವ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅವ್ಯವಹಾರಕ್ಕೂ ಹಾಗೂ ಇತ್ತೀಚೆಗೆ ಮುಕ್ತಾಯ ಗೊಂಡ ಲೋಕಸಭಾ ಚುನಾವಣೆಗೂ ಕೆ ನಂಟು ಇರುವುದು ಪತ್ತೆಯಾಗಿದೆ ಎಂದು ಪ್ರಕರಣದ ಕುರಿತು ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲ ಯ (ಇ.ಡಿ) ಸೋಟಕ ಮಾಹಿತಿ ನೀಡಿದೆ. ನಿಗಮದಿಂದ ಅಕ್ರಮವಾಗಿ ವರ್ಗಾವಣೆ ಮಾಡಲಾದ ಹಣವನ್ನು ಲೋಕಸಭಾ ಚುನಾವಣೆ ವೇಳೆ ಮದ್ಯ ಖರೀದಿಗೆ ಬಳಸಿರುವುದು ಕಂಡು ಬಂದಿದೆ ಎಂದು ಇ.ಡಿ. ಬುಧವಾರ ಬಿಡುಗಡೆ ಮಾಡಿದ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ಅಕ್ರಮ ಹಣ ವರ್ಗವಣೆ ಪ್ರಕರಣ –

ಅಲ್ಲದೆ ಮಾಜಿ ಸಚಿವ ಬಿ.ನಾಗೇಂದ್ರ ಮತ್ತು ಶಾಸಕ, ವಾಲ್ಮೀಕಿ ನಿಗಮ ಅಧ್ಯಕ್ಷ ಬಸನಗೌಡ ದದ್ದಲ್ ಮನೆ ಮೇಲೆ ದಾಳಿ ನಡೆಸಿದ ವೇಳೆ, ಅಕ್ರಮದ ಹಣವನ್ನು ಲೋಕಸಭಾ ಚುನಾವ ಣೆಗೆ ಬಳಸಿರುವ ಕುರಿತೂ ದಾಖಲೆಗಳು ಸಿಕ್ಕಿವೆ ಎಂದು ಇ.ಡಿ. ಮಾಹಿತಿ ನೀಡಿದೆ. ಈ ಮಾಹಿತಿ, ಪ್ರಕರಣದಲ್ಲಿ ಪಕ್ಷದ ಯಾವುದೇ ಸಚಿವರು, ಶಾಸಕರು ಭಾಗಿಯಾಗಿಲ್ಲ ಎಂದು ವಾದಿಸಿದ್ದ ಕಾಂಗ್ರೆಸ್‌ ಸರ್ಕಾರಕ್ಕೆ ಭಾರೀ ಇರುಸುಮುರಸು ಉಂಟುಮಾಡಿದೆ.

   

Related Articles

error: Content is protected !!