Home » ನಾಳೆ ಧರ್ಮಸ್ಥಳಕ್ಕೆ ಉಪರಾಷ್ಟ್ರಪತಿ 
 

ನಾಳೆ ಧರ್ಮಸ್ಥಳಕ್ಕೆ ಉಪರಾಷ್ಟ್ರಪತಿ 

ಜಗದೀಪ್‌ ಧನಕರ್

by Kundapur Xpress
Spread the love

ಮಂಗಳೂರು : ಉಪರಾಶ್ವಪತಿ ಜಗದೀಪ್‌ ಧನಕರ್  ಅವರು ನಾಳೆ ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸಲಿದ್ದು, ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಭಕ್ತಾದಿಗಳಿಗಾಗಿ ನಿರ್ಮಿಸಿರುವ ನೂತನ ಸಂಕೀರ್ಣ ‘ಶ್ರೀ ಸಾನಿಧ್ಯವನ್ನು ಅಪರಾಹ್ನ 2.00 ಗಂಟೆಯ ವೇಳೆಗೆ ಉದ್ಘಾಟಿಸಲಿರುವ  ಉಪರಾಷ್ಟ್ರಪತಿಗಳು ಯೋಜನೆಯ 2024-25నేయ ಜ್ಞಾನದೀಪ ಕಾರ್ಯಕ್ರಮಗಳಿಗೆ ಚಾಲನೆ ನೀಡಲಿದ್ದಾರೆ.

ರಾಜ್ಯಸಭಾ ಸದಸ್ಯ, ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಡಾ.ಸುಧೇಶ್ ಧನ್‌ಕರ್, ಜ್ಞಾನ ವಿಕಾಸ ಮಹಿಳಾ ಸಬಲೀಕರಣ ಕಾರ್ಯಕ್ರಮದ ಅಧ್ಯಕ್ಷರಾದ ಹೇಮಾವತಿ ವಿ ಹೆಗ್ಗಡೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಶಾಸಕ ಹರೀಶ್ ಪೂಂಜಾ ಮತ್ತಿತರರು ಭಾಗವಹಿಸಲಿದ್ದಾರೆ.

 

Related Articles

error: Content is protected !!