ಬೆಂಗಳೂರು : ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರವನ್ನು ತ್ಯಾಗ ಮಾಡಿದ ಪ್ರತಿಫಲವಾಗಿ ಸಂಸದೆ ಸುಮಲತಾ ಅಂಬರೀಷ್ ಅವರನ್ನು ಬಿಜೆಪಿ ಹೈಕಮಾಂಡ್ ನಾಯಕರು ಮೇಲ್ಮನೆಗೆ ಕಳುಹಿಸುವ ಸಾಧ್ಯತೆ ಇದೆ. ಜೂ.13ರಂದು ವಿಧಾನಸಭೆಯಿಂದ ವಿಧಾನಪರಿಷತ್ ನಡೆಯುವ ಚುನಾವಣೆಗೆ ಸುಮಲತಾ ಅವರಿಗೆ ಟಿಕೆಟ್ ನೀಡುವ ನಿರೀಕ್ಷೆ ಇದೆ. ಈ ಮೂಲಕ ವಿಧಾನಪರಿಷತ್ ಸದಸ್ಯೆಯನ್ನಾಗಿ ಮಾಡುವ ಸಾಧ್ಯತೆ ಇದೆ. ಬಿಜೆಪಿ ಹೈಕಮಾಂಡ್ ಈ ಬಗ್ಗೆ ಚಿಂತನೆ ನಡೆಸಿದೆ ಎಂದು ಹೇಳಲಾಗಿದೆ.