ಬೆಂಗಳೂರು : ವಿಧಾನಸಭೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕುಟುಂಬದ ಹೆಸರು ತಳುಕು ಹಾಕಿಕೊಂಡಿರುವ ಮುಡಾ ನಿವೇಶನ ಅಕ್ರಮ ಹಂಚಿಕೆ ಆರೋಪ ಪ್ರಕರಣ ಉಭಯ ಸದನಗಳಲ್ಲಿ ಕೋಲಾಹಲ ಸೃಷ್ಟಿಸಿದ್ದು, ಈ ಬಗ್ಗೆ ಬಿಜೆಪಿ ಮಂಡಿಸಿದ್ದ ನಿಲುವಳಿಯನ್ನು ಎರಡೂ ಸದನಗಳಲ್ಲೂ ತಿರಸ್ಕರಿಸಿದ್ದರಿಂದ ಬಿಜೆಪಿ ಹಾಗೂ ಜೆಡಿಎಸ್ ಸದಸ್ಯರು ಉಭಯ ಸದನಗಳಲ್ಲಿ ಅಹೋರಾತ್ರಿ ಧರಣಿ ಆರಂಭಿಸಿದ್ದಾರೆ
ಬುಧವಾರ ಉಭಯ ಸದನಗಳಲ್ಲಿ ನಿಲುವಳಿ ಸೂಚನೆ ಮಂಡಿಸಿದ ಬಿಜೆಪಿ ಸದಸ್ಯರು, ‘ಮುಖ್ಯಮಂತ್ರಿ ಸಿದ್ದ ರಾಮಯ್ಯ ಅವರು ತಮ್ಮ ಕುಟುಂಬ ಸದಸ್ಯರ ಹೆಸರಿನಲ್ಲಿ ಅಕ್ರಮವಾಗಿ 14 ನಿವೇಶನ ಪಡೆದಿದ್ದು ಸಾವಿರಾರು ಕೋಟಿ ರು.ಗಳ ಅಕ್ರಮವಾಗಿದ್ದು ಚರ್ಚೆಗೆ ಅವಕಾಶ ನೀಡಬೇಕು’ ಎಂದು ಆಗ್ರಹಿ ಸಿದರು. ಆದರೆ, ವಿಧಾನಸಭೆಯಲ್ಲಿ ಸಭಾಧ್ಯಕ್ಷ ಯು.ಟಿ. ಖಾದರ್ ಹಾಗೂ ವಿಧಾನ ಪರಿಷತ್ `ನಲ್ಲಿ ಸಭಾಪತಿ ಬಸವರಾಜ ಹೊರಟ್ಟಿ ಅವರು ಅವಕಾಶ ಇಲ್ಲ ಎಂದು ಹೇಳಿ ನಿಲುವಳಿ ಸೂಚನೆಯನ್ನು ತಿರಸ್ಕರಿಸಿದರು