Home » ವಿನಯ್‌ ಕುಲಕರ್ಣಿ ಮತ್ತೆ ಜೈಲಿಗೆ
 

ವಿನಯ್‌ ಕುಲಕರ್ಣಿ ಮತ್ತೆ ಜೈಲಿಗೆ

ಯೋಗೀಶ್‌ ಗೌಡ ಹತ್ಯೆ ಪ್ರಕರಣ

by Kundapur Xpress
Spread the love

ಬೆಂಗಳೂರು : ಧಾರವಾಡದ ಮಾಜಿ ಜಿಪಂ ಸದಸ್ಯ ಯೋಗೀಶ್ ಗೌಡ ಕೊಲೆ ಪ್ರಕರಣದ ಆರೋಪಿ ಮಾಜಿ ಸಚಿವ, ಶಾಸಕ ವಿನಯ್ ಕುಲಕರ್ಣಿ ಮತ್ತೆ ಜೈಲು ಪಾಲಾಗಿದ್ದಾರೆ. ಶುಕ್ರವಾರ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಹಾಜರಾಗಿದ್ದ ವಿನಯ್ ಕುಲಕರ್ಣಿ ಅವರನ್ನು ಸಿಬಿಐ ಅಧಿಕಾರಿಗಳ ವಶಕ್ಕೆ ನೀಡಲಾಯಿತು. ಬಳಿಕ ಸಿಬಿಐ ಅಧಿಕಾರಿಗಳು ವಿನಯ್ ಕುಲಕರ್ಣಿಅವರನ್ನು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ಕರೆದೊಯ್ದು ಬಿಟ್ಟರು

ವಾರದ ಹಿಂದೆಯಷ್ಟೇ ಸುಪ್ರೀಂ ಕೋರ್ಟ್ ವಿನಯ್ ಕುಲಕರ್ಣಿ ಅವರ ಜಾಮೀನು ರದ್ದು ಮಾಡಿತ್ತು.ಜತೆಗೆ ಏಳು ದಿನದೊಳಗೆ ನ್ಯಾಯಾಲಯಕ್ಕೆ ಹಾಜರಾಗುವಂತೆಯೂ ಸೂಚಿಸಿತ್ತು. ಅದರಂತೆ ವಿನಯ್ ಕುಲಕರ್ಣಿ ಶುಕ್ರವಾರ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಹಾಜರಾಗಿದ್ದರು. ಈ ವೇಳೆ ವಿಚಾರಣೆ ಮಾಡಿದ ನ್ಯಾಯಾಲಯವು ಎನಯ್ ಕುಲಕರ್ಣಿ ಅವರನ್ನು ಸಿಬಿಐ ಅಧಿಕಾರಿಗಳಿಗೆ ಒಪ್ಪಿಸಿತು.

ಸಿಬಿಐ ಪರ ವಿಶೇಷ ಸರ್ಕಾರಿ ಅಭಿಯೋಜಕ ಗಂಗಾಧರ ಶೆಟ್ಟಿ ಸುದ್ದಿಗಾರರೊಂದಿಗೆ ಮಾತನಾಡಿ, ಸುಪ್ರೀಂ ಕೋರ್ಟ್‌ನಲ್ಲಿ ವಿನಯ್ ಕುಲಕರ್ಣಿ ಜಾಮೀನು ರದ್ದಾಗಿತ್ತು. ವಾರದೊಳಗೆ ನ್ಯಾಯಾಲಯಕ್ಕೆ ಹಾಜರಾಗುವಂತೆ ಆದೇಶಿಸಲಾಗಿತ್ತು. ಅದರಂತೆ ನ್ಯಾಯಾಲಯಕ್ಕೆ ಹಾಜರಾಗಿದ್ದಾಗ ವಶಕ್ಕೆ ಪಡೆದು ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ ಎಂದರು

 

Related Articles

error: Content is protected !!