ಚಿಂತಾಮಣಿ : ರಾಜ್ಯಮಟ್ಟದಲ್ಲಿ ಸದ್ದು ಮಾಡುತ್ತಿರುವ ವಕ್ಸ್ ಆಸ್ತಿಯ ಕಿಚ್ಚು ಇದೀಗ ಚಿಂತಾಮಣಿಗೂ ವ್ಯಾಪಿಸಿದೆ. ತಾಲ್ಲೂಕಿನ ತಿಮ್ಮಸಂದ್ರ ಗ್ರಾಮದಲ್ಲಿನ ವಕ್ಟ್ ಬೋರ್ಡ್ ಆಸ್ತಿ ವಿವಾದ ಭುಗಿಲೆದ್ದಿದೆ. ಗ್ರಾಮದ ಕೆಲವರ ಜಮೀನುಗಳಲ್ಲಿ ರೈತರು ಉಳುಮೆ ಮಾಡಲು ಹೋದಾಗ ಕೆಲವು ಮುಸ್ಲಿಂ ಮುಖಂಡರು ಆ ಜಾಗ ತಮ್ಮದಾಗಿದ್ದು, ಅಲ್ಲಿ ಯಾರೊಬ್ಬರೂ ಉಳುಮೆ ಮತ್ತು ಇತರೆ ಚಟುವಟಿಕೆಗಳನ್ನು ಮಾಡಬಾರದೆಂದು ತಗಾದೆ ತೆಗೆದ್ದಾರೆ. ಈ ಹಿನ್ನೆಲೆಯಲ್ಲಿ ಎರಡು ಗುಂಪುಗಳ ಮಧ್ಯೆ ಮಾತಿನ ಚಕಮತಿ ನಡೆದು ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣಗೊಂಡಿದ್ದು ಪೊಲೀಸರು ಮಧ್ಯ ಪ್ರವೇಶಿಸಿ ಪರಿಸ್ಥಿತಿಯನ್ನು ತಿಳಿಗೊಳಿಸಿದ್ದಾರೆ.
ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ತಾಲೂಕಿನ ತಿಮ್ಮಸಂದ್ರ ಗ್ರಾಮದಲ್ಲಿ ವಕ್ಸ್ ಆಸ್ತಿ ಎಂದು ನಮೂದಾಗಿರುವ ಜಮೀನಿನಲ್ಲಿ ಉಳುಮೆಗೆ ಮುಂದಾಗಿದ್ದ ರೈತರ ಮೇಲೆ ಪೊಲೀಸರು ಲಾಠಿಚಾರ್ಜ್ ಮಾಡಿರುವ ಘಟನೆ ಖಂಡನೀಯ. ತನ್ನ ಓಲೈಕೆ ರಾಜಕಾರಣಕ್ಕೆ ರೈತರನ್ನು ಬಲಿಕೊಡಲು ಈ ಕಟುಕ ಕಾಂಗ್ರೆಸ್ ಸರ್ಕಾರ ಮುಂದಾಗಿದೆ. ಅನ್ನದಾತರ ಶಾಪ ಈ ಸರ್ಕಾರವನ್ನು ಸುಡುವ ದಿನ ದೂರವಿಲ್ಲ ಎಂದು ಪ್ರತಿಪಕ್ಷನಾಯಕ ಆರ್. ಅಶೋಕ್ ಪ್ರತಿಕ್ರಿಯಿಸಿದ್ದಾರೆ