ಬೆಂಗಳೂರು : ವಕ್ಸ್ ಬೋರ್ಡ್ನಿಂದ ರೈತರಿಗೆ ನೋಟಿಸ್ ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ 1973-74ರಲ್ಲಿ ಅಧಿಸೂಚನೆಗೂ ಮೊದಲು ದಾಖಲೆಗಳನ್ನು ರೈತರು ಸಲ್ಲಿಸಿದರೆ, ಅಂತಹ ಅಧಿಸೂಚಿತ ಜಾಗಗಳನ್ನು ಕೈಬಿಡಲು ಸರ್ಕಾರ ಸಿದ್ದವಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಕಂದಾಯ ಸಚಿವ ಕೃಷ್ಣಬೈರೇಗೌಡ ನೀಡಿರುವ ಹೇಳಿಕೆಯನ್ನೇ ಜಾಲತಾಣ ಎಕ್ಸ್‌ನಲ್ಲಿ ಹಾಕಿಕೊಂಡಿರುವ ಸಿಎಂ ಅವರು, ವಿಜಯಪುರ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಕಾರ್ಯಪಡೆ ರಚನೆ ಮಾಡಲಾಗುವುದು. ಅದರಲ್ಲಿ ಸಹಾಯಕ ಆಯುಕ್ತರು, ಎಲ್ಲ ತಹಸೀಲ್ದಾರರು, ಕಾರ್ಯನಿರ್ವಾಹಕ ಅಧಿಕಾರಿಗಳು, ವಕ್ಸ್ ಅಧಿಕಾರಿಗಳು ಇರುತ್ತಾರೆ ಎಂದು ತಿಳಿಸಿದ್ದಾರೆ.
ಯಾವ ರೈತರನ್ನೂ ಒಕ್ಕಲೆಬ್ಬಿಸುವುದಿಲ್ಲ:
ಯಾವ ರೈತರನ್ನೂ ತಮ್ಮ ಜಮೀನುಗಳಿಂದ ಒಕ್ಕಲೆಬ್ಬಿಸುವುದಿಲ್ಲ. ಒಂದು ವೇಳೆ ರೈತರಿಗೆ ನೋಟಿಸ್ ನೀಡಲಾಗಿದ್ದರೆ, ಅದನ್ನು ವಾಪಸ್ ಪಡೆಯಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ