Home » ವಕ್ಫ್ ನೋಟಿಸ್‌ ವಿರುದ್ದ ರಾಜ್ಯಾದ್ಯಂತ ಪ್ರತಿಭಟನೆ
 

ವಕ್ಫ್ ನೋಟಿಸ್‌ ವಿರುದ್ದ ರಾಜ್ಯಾದ್ಯಂತ ಪ್ರತಿಭಟನೆ

by Kundapur Xpress
Spread the love

ಬೆಂಗಳೂರು: ವಕ್ಸ್ ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ವಿವಿಧ ಜಿಲ್ಲೆಗಳ ಮಠ-ದೇವಸ್ಥಾನಗಳು, ಶಾಲಾ-ಕಾಲೇಜುಗಳು, ಸರ್ಕಾರಿ ಕಚೇರಿಗಳಿಗೆ ನೀಡಿರುವ ನೋಟಿಸ್ ನೀಡಿರುವುದನ್ನು ವಿರೋಧಿಸಿ ಬಿಜೆಪಿಯಿಂದ ಸೋಮವಾರ ರಾಜ್ಯಾದ್ಯಂತ ಭಾರೀ ಪ್ರತಿಭಟನೆ ನಡೆಯಿತು

ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲದೆ ತಾಲೂಕು ಕೇಂದ್ರಗಳಲ್ಲೂ ಹೋರಾಟ ನಡೆಸಿದ ಬಿಜೆಪಿ ಕಾರ್ಯಕರ್ತರು ವಕ್ಫ್ ಗದ್ದಲ ಮುಂದಿ ಟ್ಟುಕೊಂಡು ಮುಖ್ಯಮಂತ್ರಿ ಸಿದ್ದರಾಮಯ್ಯ, ವಕ್ಸ್ ಸಚಿವ ಜಮೀರ್ ಅಹಮದ್ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ವಕ್ಸ್ ಮೂಲಕ ಕಾಂಗ್ರೆಸ್ ಸರ್ಕಾರ ಹಿಂದೂಗಳ, ರೈತರ ಆಸ್ತಿ ಕಬಳಿಕೆ ಮಾಡಲು ಹೊರಟಿದೆ. ಈ ಕುರಿತು ಸಿಬಿಐ ತನಿಖೆ ಆಗಬೇಕು. ವಕ್ಫ್ ಅಧಿಸೂಚನೆ ವಾಪಸ್‌ ಪಡೆಯಬೇಕು ಎಂದು ಒತ್ತಾಯಿಸಿದರು

ಮಂಗಳೂರು, ಕೊಪ್ಪಳ, ಗದಗ ಸೇರಿ ರಾಜ್ಯ ದ ಬಹುತೇಕ ಕಡೆ ಪಾದಯಾತ್ರೆ ನಡೆದರೆ ಹಾಸನ, ಚಿಕ್ಕಮಗಳೂರು ಮತ್ತಿತರ ಕಡೆ ಮಾನವ ಸರಪಳಿ ನಡೆಸಿ ಗಮನ ಸೆಳೆಯಲಾಯಿತು. ವಿಜಯಪುರದಲ್ಲಿ ಶಾಸಕ ಬಸನಗೌಡ ಯತ್ನಾಳ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರು ಅಹೋರಾತ್ರಿ ಧರಣಿ ಆರಂಭಿಸಲಾಯಿತು

ಹಾವೇರಿ ಜಿಲ್ಲೆಯ ಶಿಗ್ಗಾಂವಿಯಲ್ಲಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೋಲಾರದಲ್ಲಿ ಪ್ರತಿಪಕ್ಷ ನಾಯಕ ಆರ್. ಅಶೋಕ್, ಬಳ್ಳಾರಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಮಾಜಿ ಸಚಿವ ಜನಾರ್ದನ ರೆಡ್ಡಿ ಮತ್ತಿತರರ ಉಪಸ್ಥಿತಿಯಲ್ಲಿ ಪ್ರತಿಭಟನೆ ನಡೆದರೆ, ಉಳಿದೆಡೆ ಬಿಜೆಪಿ ಸಂಸದರು, ಶಾಸಕರು, ಮಾಜಿ ಶಾಸಕರು ಹೋರಾಟದ ನೇತೃತ್ವ ವಹಿಸಿದ್ದರು.

   

Related Articles

error: Content is protected !!