196
ಮಳವಳ್ಳಿ : ಬೆಂಗಳೂರಿನ ಜನರಿಗೆ ಕುಡಿಯುವ ನೀರು ಒದಗಿಸುವ ಕಾವೇರಿ 5ನೇ ಹಂತದ ಯೋಜನೆಗೆ ಚಾಲನೆ ದೊರೆತಿದೆ. 6ನೇ ಹಂತ ಯೋಜನೆ ಮಾಡಲು ಅಧಿಕಾರಿಗಳಿಗೆ ಸೂಚನೆ ನೀಡಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಮಳವಳ್ಳಿ ತಾಲೂಕಿನ ತೊರೆಕಾಡನಹಳ್ಳಿಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ರೊಂದಿಗೆ ಬೆಂಗಳೂರು 110 ಹಳ್ಳಿಗಳಿಗೆ ಕುಡಿಯುವ ನೀರು ಸರಬರಾಜು ಮಾಡುವ ಕಾವೇರಿ 5ನೇ ಹಂತದ ಯೋಜನೆಯನ್ನು ಲೋಕಾರ್ಪಣೆಗೊಳಿಸಿ ಸಿ ಎಂ ಮಾತನಾಡಿದರು.
ಬೆಂಗಳೂರಿಗೆ ಸಂಪೂರ್ಣ ನೀರು ಪೂರೈಸುವುದು ನಮ್ಮ ಉದ್ದೇಶ. ಇದಕ್ಕಾಗಿ 6ನೇ ಹಂತ ಕೂಡ ಮಾಡಲು ಅಧಿಕಾರಿಗಳಿಗೆ ಸೂಚನೆ ಕೊಟ್ಟಿದ್ದೇನೆ. ಈ ಯೋಜನೆಗೆ ಸುಮಾರು 7,200 ಕೋಟಿ ಅನುದಾನದ ಅವಶ್ಯಕತೆ ಇದೆ. ಆ ಹಣಕಾಸಿನ ನೆರವು ಪಡೆದು ಯೋಜನೆ ಅನುಷ್ಠಾನಗೊಳಿಸುವುದಾಗಿ ಭರವಸೆ ನೀಡಿದರು.

