Home » ಸತ್ಯವಂತರಿಗೆ ಇದು ಕಾಲವಲ್ಲ – ಯತ್ನಾಳ್
 

ಸತ್ಯವಂತರಿಗೆ ಇದು ಕಾಲವಲ್ಲ – ಯತ್ನಾಳ್

by Kundapur Xpress
Spread the love

ನವದೆಹಲಿ : ವಂಶಪಾರಂಪರ್ಯ ರಾಜಕೀಯ, ಭ್ರಷ್ಟಾಚಾರ, ಪಕ್ಷದೊಳಗಿನ ಸುಧಾರಣೆಗಳ ವಿರುದ್ಧ ಮಾತನಾಡಿದ್ದಕ್ಕಾಗಿ, ಏಕವ್ಯಕ್ತಿ ದಬ್ಬಾಳಿಕೆಯನ್ನು ತೆಗೆದುಹಾಕಿ ಮತ್ತು ಉತ್ತರ ಕರ್ನಾಟಕವನ್ನು ಅಭಿವೃದ್ಧಿಪಡಿಸಲು ವಿನಂತಿಸಿದ್ದಕ್ಕಾಗಿ ನನ್ನನ್ನು 6 ವರ್ಷ ಪಕ್ಷ ದಿಂದ ಹೊರ ಹಾಕಿದೆ. ಇದ್ದಿದ್ದು ಇದ್ದ ಹಾಗೆ ನಾನು ಹೇಳಿರುವ ವಿಚಾರಕ್ಕೆ ಪಕ್ಷ ಈ ಪ್ರತಿಫಲ ನೀಡಿದೆ. ಅಮಾನತು ನಿರ್ಧಾರ ನನ್ನ ಹೋರಾಟವನ್ನು ನಿಲ್ಲಿಸಲ್ಲ ಎಂದು ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್ ತಿಳಿಸಿದ್ದಾರೆ

ಶಿಸ್ತು ಕ್ರಮ ದುರದೃಷ್ಟಕರ

ಪಕ್ಷದಲ್ಲಿ ಶಿಸ್ತು-ತ್ಯಾಗಕ್ಕೆ ಮೊದಲ ಆದ್ಯತೆ. ಪಕ್ಷದ ಹಿರಿಯರು ಹಾಗೂ ವರಿಷ್ಠರು ಈ ವಿಷಯದಲ್ಲಿ ಎಂದಿಗೂ ರಾಜಿ ಮಾಡಿ ಕೊಂಡಿಲ್ಲ. ಶಿಸ್ತುಬದ್ಧ ಸಂಘಟನೆಯ ವ್ಯವಸ್ಥೆಯಲ್ಲಿರುವ ನಾವು ಪಕ್ಷದ ವರಿಷ್ಠರು ಕೈಗೊಂಡ ನಿರ್ಧಾರ ಗೌರವಿಸುತ್ತೇನೆ. ಆದರೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ವರಿಷ್ಠರು ತೆಗೆದುಕೊಂಡಿರುವ ಕ್ರಮವನ್ನು ನಾನು ಸಂಭ್ರಮಿಸಲಾರೆ. ಈ ಬೆಳವಣಿಗೆಯನ್ನು ದುರದೃಷ್ಟಕರವೆಂದು ದುಃಖಿಸುತ್ತೇನೆ.

• ಬಿ.ವೈ.ವಿಜಯೇಂದ್ರ , ಬಿಜೆಪಿ ರಾಜ್ಯಾಧ್ಯಕ್ಷ

 

Related Articles

error: Content is protected !!