Home » ಸಿ ಎಂ ಸಿದ್ದರಾಮಯ್ಯ ಯೋಗಾಭ್ಯಾಸ
 

ಸಿ ಎಂ ಸಿದ್ದರಾಮಯ್ಯ ಯೋಗಾಭ್ಯಾಸ

by Kundapur Xpress
Spread the love

ಬಳ್ಳಾರಿ: ಸಿಎಂ ಸಿದ್ದರಾಮಯ್ಯ ಅವರು ಯೋಗಾಭ್ಯಾಸ ಮಾಡುವ ಮೂಲಕ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಸಂಡೂರು ತಾಲೂಕು ತೋರಣಗಲ್ ಪಟ್ಟಣದ ಜೆಎಸ್‌ಡಬ್ಲ್ಯೂ ಟೌನ್‌ಶಿಪ್ ವಿದ್ಯಾ ನಗರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಆಯುಷ್ ಇಲಾಖೆ ಆಶ್ರಯದಲ್ಲಿ ಶುಕ್ರವಾರ ಬೆಳಗ್ಗೆ ಆಯೋಜಿಸಿದ್ದ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾಗವಹಿಸಿ ಲವಲವಿಕೆಯಿಂದ ಕೆಲವು ಯೋಗಾಸನಗಳ ಅಭ್ಯಾಸ ಮಾಡಿ ಗಮನಸೆಳೆದರು. ಹರಿಹರ ಪಂಚಮಸಾಲಿ ಪೀಠದ ವಚನಾನಂದ ಸ್ವಾಮೀಜಿ, ವೇದಿಕೆಯಲ್ಲಿದ್ದ ಮುಖ್ಯಮಂತ್ರಿಗಳು, ಗಣ್ಯಾತಿಗಣ್ಯರು ಸೇರಿದಂತೆ ಮಕ್ಕಳು, ಸಾರ್ವಜನಿಕರು ಹಾಗೂ ಭಾಗವಹಿಸಿದ್ದ ಜನಸ್ತೋಮಕ್ಕೆ ಯೋಗದ ವಿವಿಧ ಆಸನಗಳ ಅಭ್ಯಾಸ ಮಾಡಿಸಿದರು

ಪ್ರತಿನಿತ್ಯ ಯೋಗಾಭ್ಯಾಸ ಮಾಡುವುದರಿಂದ ಜನರ ಆರೋಗ್ಯ ಉತ್ತಮವಾಗಿರುವುದರ ಜೊತೆಗೆ, ಇಡೀ ದಿನ ವ್ಯಕ್ತಿ ಲವಲವಿಕೆಯಿಂದ ಇರಲು ಸಹಕಾರಿಯಾಗಿದೆ. ಹೀಗಾಗಿ ಎಲ್ಲರೂ ನಿತ್ಯ ಯೋಗಾಭ್ಯಾಸ ಮಾಡಬೇಕು ಎಂದು ಮನವಿ ಮಾಡಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಯೋಗಾಭ್ಯಾಸದಲ್ಲಿ ಆಸಕ್ತಿ ಯಿಂದಲೇ ಭಾಗವಹಿಸಿ, ವಿವಿಧ ಆಸನಗಳನ್ನು ಅಭ್ಯಾಸ ಮಾಡಿದರು. ಖ್ಯಾತ ಚಲನ ಚಿತ್ರ ನಟಿ ಶ್ರೀಲೀಲಾ ಎಲ್ಲರ ಆಕರ್ಷಣೆಯ ಕೇಂದ್ರ ಬಿಂದುವಾದರು. ಸಮಾರಂಭದಲ್ಲಿ ನೆರೆದಿದ್ದ ಎಲ್ಲರೂ ನಟಿ ಶ್ರೀಲೀಲಾ ಅವರಿಗೆ ಚಪ್ಪಾಳೆಯ ಸುರಿಮಳೆಗೈದರು.

 

ಬಳ್ಳಾರಿ ಜಿಲ್ಲೆಯ ಕಲಾವಿದ ಮಂಜುನಾಥ ಗೋವಿಂದ ವಾಡ ಅವರು ರಚಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಚಿತ್ರ ಕಲಾಕೃತಿಯನ್ನು ಈ ಸಂದರ್ಭ ದಲ್ಲಿ ಮುಖ್ಯಮಂತ್ರಿಗಳಿಗೆ ಕಲಾವಿದರ ಕೈನಿಂದಲೇ ಹಸ್ತಾಂತರಿಸಲಾಯಿತು. 12ನೇ ಶತಮಾನದ ಕವಿಯತ್ರಿ ಅಕ್ಕಮಹಾದೇವಿ ಅವರ ಬೃಹತ್ ಚಿತ್ರ ಕಲಾ ಕೃತಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅನಾವರಣಗೊಳಿಸಿದರು.

   

Related Articles

error: Content is protected !!