ಆನೆಗುಡ್ಡೆ : ಬ್ರಹ್ಮರಥೋತ್ಸವ ಸಂಪನ್ನ
ಕುಂದಾಪುರ : ಕುಂಭಾಸಿ ಆನೆಗುಡ್ಡೆ ಶ್ರೀ ವಿನಾಯಕ ದೇವರ ಬ್ರಹ್ಮರಥೋತ್ಸವ ಹಾಗೂ ಅಷ್ಟೋತ್ತರ ನಾಳಿಕೇರ ಗಣಯಾಗವು ಸಡಗರ ಸಂಭ್ರಮದಿಂದ ಸಂಪನ್ನಗೊಂಡಿತು
ಹೂವಿನ ಅಲಂಕಾರ ಹಾಗೂ ವಿಶೇಷ ದೀಪಲಂಕಾರಗಳಿಂದ ದೇವಾಲಯವನ್ನು ಶೃಂಗರಿಸಲಾಗಿತ್ತು ದೇವಸ್ಥಾನಕ್ಕೆ 30 ಸಾವಿರಕ್ಕೂ ಅಧಿಕ ಭಕ್ತರು ಆಗಮಿಸಿ ಶ್ರೀ ದೇವರ ಪ್ರಸಾದ ಸ್ವೀಕರಿಸಿ ಸೇವೆಯಲ್ಲಿ ಪಾಲ್ಗೊಂಡರು
ಸಂಜೆ ಸುಡುಮದ್ದು ಪ್ರದರ್ಶನ ಹಾಗೂ ಪಲ್ಲಕ್ಕಿ ಉತ್ಸವ ನಡೆಯಿತು ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಸಂಜೆ ಸಾಲಿಗ್ರಾಮದ ಸತೀಶ್ ದೇವಾಡಿಗ ಮತ್ತು ಬಳಗದವರಿಂದ ಸ್ಯಾಕ್ಸ್ಫೋನ್ ವಾದನ ಮತ್ತು ರಾತ್ರಿ ಸಾಲಿಗ್ರಾಮ ಗುರುಪ್ರಸಾದಿತ ಯಕ್ಷಗಾನ ಮಂಡಳಿಯವರಿಂದ ಯಕ್ಷಗಾನ ಪ್ರದರ್ಶನ ನಡೆಯಿತು
ಬ್ರಹ್ಮರಥೋತ್ಸವ ದಿನದಂದು ಯಾವುದೇ ಅಹಿತರ ಘಟನೆ ನಡೆದಂತೆ ಮುಂಜಾಗ್ರತ ಕ್ರಮವನ್ನು ಅನುಸರಿಸಲಾಗಿತ್ತು ಡಿ ವೈ ಎಸ್ ಪಿ ಬೆಳ್ಳಿಯಪ್ಪ ಅವರ ಮಾರ್ಗದರ್ಶನದಲ್ಲಿ ವೃತ್ತ ನಿರೀಕ್ಷಕ ನಂದಕುಮಾರ್ ಹಾಗೂ ಕುಂದಾಪುರ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ವಿನಯ್ ಕೊರ್ಲಹಳ್ಳಿ ಹಾಗೂ ಹಾಗೂ ಕೆ ಪ್ರಸಾದ್ ರವರ ನೇತೃತ್ವದಲ್ಲಿ ಬಿಗಿ ಬಂದೋಬಸ್ತನ್ನು ಏರ್ಪಡಿಸಲಾಗಿತ್ತು