Home » ಚಿಕಿತ್ಸೆ ಫಲಕಾರಿಯಾಗದೇ ಸಾವು
 

ಚಿಕಿತ್ಸೆ ಫಲಕಾರಿಯಾಗದೇ ಸಾವು

by Kundapur Xpress
Spread the love

ಬೆಳ್ತಂಗಡಿ : ಉಜಿರೆ ಕಾಲೇಜು ರಸ್ತೆಯಲ್ಲಿ ಡಿವೈಡರ್ ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ವಿದ್ಯಾರ್ಥಿ ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ನಡೆದಿದೆ

ಉಜಿರೆ ಕಾಲೇಜಿನ ಮೆಕಾನಿಕಲ್ ಡಿಪ್ಲೋಮೋ ವಿದ್ಯಾರ್ಥಿಯಾದ ಕಲ್ಮಂಜ ಗ್ರಾಮದ ಕರಿಯನೆಲ ನಿವಾಸಿ ದೀಕ್ಷಿತ್ (20 ವರ್ಷ) ಮೃತಪಟ್ಟಿದ್ದು ಊಟ ಮುಗಿಸಿ ಕಾಲೇಜಿಗೆ ತೆರಳುವ ವೇಳೆ ಬೈಕ್ ನಿಯಂತ್ರಣ ತಪ್ಪಿ ಡಿವೈಡರ್‌ ಗೆ ಢಿಕ್ಕಿ ಹೊಡೆದಿತ್ತು  ಅವರನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಯಿತು ಅಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಗುರುವಾರ ಮೃತಪಟ್ಟರು ಬೆಳ್ತಂಗಡಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

   

Related Articles

error: Content is protected !!