292
ಕುಂದಾಪುರ : ಇನ್ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ ನಡೆಸುವ ಸಿಎ ಫೌಂಡೇಶನ್ ಹಾಗೂ ಇಂಟರ್ಮೀಡಿಯೇಟ್ ಪರೀಕ್ಷೆಯಲ್ಲಿ ಡಾ| ಬಿ ಬಿ ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು ಉತ್ಕೃಷ್ಟ್ಟ ಸಾಧನೆಗೈದಿದ್ದಾರೆ.
ಪ್ರೇಕ್ಷಿತ ಶೆಟ್ಟಿ, ಪನ್ನಗ, ಯಶಸ್ ಇವರು ಸಿಎ ಇಂಟರ್ಮೀಡಿಯೇಟ್ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದರೆ, ಶಾಂತಿ, ಸಹನಾ ಹಾಗೂ ಸುವಿಧ ಆಚಾರ್ಯ ಇವರು ಸಿಎ ಫೌಂಡೇಶನ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ.


Oplus_131106

ಡಾ| ಬಿ ಬಿ ಹೆಗ್ಡೆ ಪ್ರಥಮ ದರ್ಜೆ ಕಾಲೇಜು ಹಾಗೂ ವೀ-ರೀಚ್ ಸಂಸ್ಥೆಯ ಪಠ್ಯ ಪ್ರವಚನ, ಮಧ್ಯಂತರ ಮಾದರಿ ಪರೀಕ್ಷೆ, ಹಾಗೂ ನುರಿತ ತರಬೇತುದಾರರಿಂದ ತರಬೇತಿ, ಸಲಹೆ ಮತ್ತು ಮಾರ್ಗದರ್ಶನ ಪಡೆದು ವಿದ್ಯರ‍್ಥಿಗಳು ಈ ಸಾಧನೆ ಗೈದಿದ್ದಾರೆ.
ಸಾಧಕ ವಿದ್ಯಾರ್ಥಿಗಳಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ-ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.

