ಉಡುಪಿ : ಜೂನ್ 3 ರಂದು ನಡೆಯಲಿರುವ ನೈಋತ್ಯ ಪದವೀಧರ ಕ್ಷೇತ್ರ ಮತ್ತು ನೈಋತ್ಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯ ಘಟ ನಾಯಕರ ಜಿಲ್ಲಾ ಮಟ್ಟದ ಸಮಾವೇಶವು ಮೇ 27ರಂದು ಮಧ್ಯಾಹ್ನ 2 ಗಂಟೆಗೆ ಉಡುಪಿಯ ಹೋಟೆಲ್ ಕಿದಿಯೂರಿನ ಮಾಧವ ಕೃಷ್ಣ ಸಭಾಂಗಣದಲ್ಲಿ ನಡೆಯಲಿದೆ. ಈ ಸಮಾವೇಶದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭಾಗವಹಿಸಲಿದ್ದಾರೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ತಿಳಿಸಿದ್ದಾರೆ. ಈ ಸಮಾವೇಶದಲ್ಲಿ ನೈಋತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ| ಧನಂಜಯ ಸರ್ಜಿ ಹಾಗೂ ನೈಋತ್ಯ ಶಿಕ್ಷಕರ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿ ಎಸ್.ಎಲ್. ಭೋಜೇಗೌಡ ಸಹಿತ ಪಕ್ಷದ ಶಾಸಕರು ಮತ್ತು ಮುಖಂಡರು ಭಾಗವಹಿಸಲಿದ್ದಾರೆ
ಉಡುಪಿ ಜಿಲ್ಲೆಯಾದ್ಯಂತ ಮಂಡಲವಾರು ನೈಋತ್ಯ ಪದವೀಧರ ಮತ್ತು ನೈಋತ್ಯ ಶಿಕ್ಷಕರ ಕ್ಷೇತ್ರದ ಪ್ರತಿ 25 ಮತದಾರರ ಜವಾಬ್ದಾರಿಯನ್ನು ಹೊಂದಿರುವ ಘಟ ನಾಯಕರು ಹಾಗೂ ಪಕ್ಷದ ಪ್ರಮುಖರು, ಬಿಜೆಪಿ ಜಿಲ್ಲಾ ಮೋರ್ಚಾ, ಮಂಡಲ, ಪ್ರಕೋಷ್ಠಗಳ ಸಹಿತ ವಿವಿಧ ಸ್ತರದ ಪದಾಧಿಕಾರಿಗಳು ಮತ್ತು ಪಕ್ಷದ ಕಾರ್ಯಕರ್ತರು ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.